ನದಿಯ ನೆನಪಿನ ಹಂಗು

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 264

₹ 135.00




Year of Publication: 2011
Published by: ಅಂಕಿತ ಪುಸ್ತಕ
Address: ಪ್ರಕಾಶಕರು : ಅಂಕಿತ ಪುಸ್ತಕ, #53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004.
Phone: 080 - 2661 7100 / 2661 7755

Synopsys

ಲೇಖಕ ಜೋಗಿ (ಗಿರೀಶ ರಾವ್ ಹತ್ವಾರ್) ಅವರ ಕಾದಂಬರಿ-ನದಿಯ ನೆನಪಿನ ಹಂಗು. ಎಲ್ಲ ನದಿಯ ನೀರು ಕಡಲಿಗೆ ಹೋಗುತ್ತದೆ ಎಂದು ತಿಳಿದಿದ್ದರೂ ಎಲ್ಲ ನದಿಗಳಿಗೂ ಕಡಲು ಇರುವುದಿಲ್ಲ. ಕಡಲ ಮಾರ್ಗ ಮಧ್ಯೆಯೇ ಅವು ಬತ್ತಿ ಹೋಗುತ್ತವೆ. ಅಥವಾ ಕಡಲಿಂದ ಬಹು ದೂರ ಇರುತ್ತವೆ. ಇಂತಹ ಸಂದೇಶದ ಕಾದಂಬರಿ ಇದು. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳಖ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥಾ ವಸ್ತು ಓದುಗರ ಗಮನ ಸೆಳೆಯುತ್ತದೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books