ಲೇಖಕ ಹಾಗೂ ನಗೆಗಾರ ಗಂಗಾವತಿ ಪ್ರಾಣೇಶ್ ಅವರ ಕೃತಿ-ನಗಿಸುವವನ ನೋವುಗಳು. ಬೀchi ಸಾಹಿತ್ಯದಿಂದ ಪ್ರಭಾವಿತರಾಗಿ ಜನರನ್ನು ಮನರಂಜಿಸಲು ಲೇಖಕರು ನಗೆಹನಿಗಳನ್ನು ಹೇಳುವ ಮೂಲಕ ಜನರನ್ನು ರಂಜಿಸಲು ಮುಂದಾಗಿ ಹತ್ತು ಹಲವು ಕಾರ್ಯಕ್ರಮ ನೀಡಿದ್ದಾರೆ. ನಗಿಸುವವನ ನೋವುಗಳು ಸಾಕಷ್ಟಿದ್ದರೂ ಜನ ಅದನ್ನು ಗಮನಿಸುವುದಿಲ್ಲ. ಇಂತಹ ಕಲಾವಿದನ ಹಿಂದಿರುವ ನೋವನ್ನು ತೆರೆದಿಡುವ ಕೃತಿ ಇದು.
ಪ್ರಾಣೇಶ್ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ಸೆಪ್ಟಂಬರ್ 8, 1961ರಲ್ಲಿ ಗಂಗಾವತಿಯಲ್ಲಿ ಜನಿಸಿದ ಪ್ರಾಣೇಶ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಯಲಬುರ್ಗಿಯಲ್ಲೂ, ಬಿ.ಕಾಂ. ಪದವಿಯನ್ನು ಗಂಗಾವತಿಯಲ್ಲೂ ಪೂರೈಸಿದರು. ಪ್ರಾಣೇಶ್ ಅವರ ತಂದೆ ಸ್ವಾತಂತ್ರ್ಯ ಯೋಧ ಬಿ.ವೆಂಕೋಬಾಚಾರ್ಯರು, ಶಾಲಾ ಶಿಕ್ಷಕರಾಗಿದ್ದರು. ತಾಯಿ ಸತ್ಯವತಿ ಬಾಯಿ. ತಾಯಿಯಿಂದ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಂಡವರು. ಹಾಸ್ಯಕ್ಕಷ್ಟೇ ಸೀಮಿತವಾದ ಪ್ರಾಣೇಶ್ ನಗಿಸುವವನ ನೋವುಗಳು, ನಗ್ತಾ ನಲಿ ಅಳ್ತಾ ಕಲಿ, ಪಂಚ್ ಪಕ್ವಾನ್ನ ಮುಂತಾದ ಪುಸ್ತಕಗಳನ್ನು ರಚಿಸಿದ್ದಾರೆ. ಜೊತೆಗೆ ಹಲವಾರು ಕ್ಯಾಸೆಟ್, ಸಿಡಿಗಳನ್ನೂ ಹೊರತಂದಿದ್ದಾರೆ. ಯೂ ಟ್ಯೂಬ್ ನಂತಹ ಅಂತರ್ಜಾಲ ಮಾಧ್ಯಮಗಳಲ್ಲಿ ಅವರ ಹಲವಾರು ಕಾರ್ಯಕ್ರಮಗಳ ತುಣುಕುಗಳು ನಿರಂತರವಾಗಿ ಜನಪ್ರೀತಿಯನ್ನು ಸಂಪಾದಿಸುತ್ತಿವೆ. ...
READ MORE