‘ನನಗ್ಯಾಕೋ ಡೌಟು !’ ಬಿ.ಆರ್. ಲಕ್ಷ್ಮಣರಾವ್ ಅವರ ನಗೆ ನಾಟಕ. ಸಂಬಂಧಗಳ ನಡುವಿನ ಸೂಕ್ಷ್ಮತೆಯ ಕುರಿತು ರಚಿತವಾಗಿರುವ ಈ ನಾಟಕ, ತೆಳು ಹಾಸ್ಯದ ಮೂಲಕವೇ ಸಣ್ಣ ಅನುಮಾನಗಳು ಸಂಬಂಧವನ್ನು ಹಾಳುಗೆಡವುದರ ಕುರಿತು ತಿಳಿಸುತ್ತದೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ನಾಣ್ನುಡಿಯನ್ನು ನೆನಪಿಸುವ ಈ ನಾಟಕ, ಹಲವು ಪ್ರದರ್ಶನಗಳನ್ನು ಕಂಡು ಯಶಸ್ವಿಯಾಗಿದೆ.
ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್. ಲಕ್ಷ್ಮಣರಾವ್ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...
READ MORE