ಮೂಡ್ನಾಕೂಡು ಚಿನ್ನಸ್ವಾಮಿ ಅವರ ಆತ್ಮ ಕಥನ `ನೆನಪಿನ ಹಕ್ಕಿಯ ಹಾರಲು ಬಿಟ್ಟು’. ಕೃತಿಗೆ ಬೆನ್ನುಡಿ ಬರೆದಿರುವ ಅಧ್ಯಯನಕಾರ ಮನು ವಿ. ದೇವದೇವನ್ “ಮೂಡ್ನಾಕೂಡು ಚಿನ್ನಸ್ವಾಮಿಯವರ ಆತ್ಮಕಥನ ಇದುವರೆಗೂ ಬಂದಿರುವ ಸೃಜನ ಮತ್ತು ಸೃಜನೇತರ ದಲಿತ ಸಂಕಥನಗಳನ್ನು ಮೀರಿ ತನ್ನದೇ ಆದ ವ್ಯಾಪ್ತಿ, ವಿಸ್ತಾರವನ್ನು ಪಡೆದುಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.
ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...
READ MORE