ಐರಾವತ, ದೀಪದ ಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ತೆರೆದ ಬಾಗಿಲು, ದುಂಡು ಮಲ್ಲಿಗೆ, ಸಂಜೆ ಹಾಡು, ಕೈಮರದ ನೆಳಲಲ್ಲಿ, ಎದೆ ತುಂಬ ನಕ್ಷತ್ರ, ಮೌನದಲಿ ಮಾತ ಹುಡುಕುತ್ತ, ದೀಪ ಸಾಲಿನ ನಡುವೆ-ಇವು ಕೆ.ಎಸ್. ನರಸಿಂಹಸ್ವಾಮಿ ಅವರ ಕವನ ಸಂಕಲನಗಳು. ಆ ಪೈಕಿ ನವಪಲ್ಲವ, ಕವನ ಸಂಕಲನವೂ ಒಂದು. ತೀರಾ ನವಿರಾದ ಭಾವ ಸೂಕ್ಷ್ಮತೆಗಳಿಗೆ ಹೆಸರಾದ ಕವಿಯ ಇಂತಹ ಗೀತೆಗಳು ವ್ಯಕ್ತಿಯ ಮನದ ಅರಿವಿಲ್ಲದೇ ಗುನುಗುನಿಸುವಂತೆ ಮಾಡುತ್ತವೆ.
ಮೈಸೂರ ಮಲ್ಲಿಗೆಯ ಕವಿಯೆಂದು ಪ್ರಖ್ಯಾತರಾಗಿ ಮನೆಮಾತಾದ ಕೆ.ಎಸ್. ನರಸಿಂಹಸ್ವಾಮಿ ಅವರು (ಕಿಕ್ಕೇರಿ ಸುಬ್ಬರಾಯ ನರಸಿಂಹಸ್ವಾಮಿ) ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 1915ರ ಜನೆವರಿ 26ರಂದು ಜನಿಸಿದರು. ತಂದೆ ಸುಬ್ಬರಾಯ, ತಾಯಿ ನಾಗಮ್ಮ. ಮೈಸೂರಿನ ಮಹಾರಾಜ ಹೈಸ್ಕೂಲು, ಇಂಟರ್ ಮೀಡಿಯೇಟ್ ಕಾಲೇಜ್ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜುಗಳಲ್ಲಿ ಓದಿದ ಅವರು ಆರ್ಥಿಕ ತೊಂದರೆಗಳಿಂದ ಡಿಗ್ರಿ ವ್ಯಾಸಂಗವನ್ನು ಪೂರ್ಣ ಮಾಡಲಾಗಲಿಲ್ಲ. 22ನೇ ವಯಸ್ಸಿನಲ್ಲಿ ಗುಮಾಸ್ತೆ ಹುದ್ದೆಗೆ ಸೇರಿದ್ದರು. ಆ ವೇಳೆಗೆ ತಿಪಟೂರಿನ ವೆಂಕಮ್ಮನವರೊಂದಿಗೆ ವಿವಾಹವಾಗಿತ್ತು. ತಮ್ಮ ವೃತ್ತಿಜೀವನದ ಕಾಲದಲ್ಲಿ ಮೈಸೂರು, ನಂಜನಗೂಡು, ಬೆಂಗಳೂರುಗಳಲ್ಲಿ ಬೇರೆ ಬೇರೆ ಇಲಾಖೆಗಳಲ್ಲಿ ಸರಕಾರಿ ನೌಕರರಾಗಿ ದುಡಿದು ...
READ MORE