ಲೇಖಕ ಎ.ಆರ್. ಮಣಿಕಾಂತ ಅವರ ಕೃತಿ -ನವಿಲು ಗರಿ (ನನಗೊಂದು, ನಿನಗೂ ಒಂದು) . ಅಂಕಣ ಬರೆಹಗಳ ಮೂಲಕ ಖ್ಯಾತಿ ಪಡೆದಿರುವ ಮಣಿಕಾಂತ ಅವರ ಭಾವಪೂರ್ಣವಾದ ಲೇಖನಗಳು ಈ ಕೃತಿಯಲ್ಲಿ ಒಳಗೊಂಡಿವೆ.
ಹಣ ಇದ್ದರೆ ನೆಮ್ಮದಿಯಾಗಿರಬಹುದು ಎಂಬುದು ಸಾಮಾನ್ಯ ನಂಬಿಕೆ. ಆದರೆ, ಹಣ ಇದ್ದ ಮನೆಯಲ್ಲೇ ಹೆಚ್ಚು ಅಶಾಂತಿ ತಾಂಡವವಾಡುತ್ತಿರುತ್ತದೆ. ನೆಮ್ಮದಿಗಾಗಿ ಹಣ ಖರ್ಚು ಮಾಡುತ್ತಾರೆ. ಆದರೆ, ಹಣದಲ್ಲಿ ನೆಮ್ಮದಿ ಇಲ್ಲ ಎಂಬ ಸತ್ಯವನ್ನು ಅವರು ತಿಳಿಯುವುದೇ ಇಲ್ಲ. ಇಂತಹ ಕುಟುಂಬಗಳ ಕರಾಳ ಕ್ಷಣ- ದಿನಗಳನ್ನು ಲೇಖಕರು ಇಲ್ಲಿ ಕಟ್ಟಿಕೊಟ್ಟಿದ್ದಾರೆ.
ಪತ್ರಕರ್ತ, ಬರಹಗಾರರಾಗಿರುವ ಮಣಿಕಾಂತ್ ಅವರು ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆಯತನಹಳ್ಳಿಯವರು. ಆಟೋ ಮೊಬೈಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಇವರು ವಿಜಯ ಕರ್ನಾಟಕ, ಹಾಯ್ ಬೆಂಗಳೂರು, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿರುವ ಇವರು ಈ ಗುಲಾಬಿಯು ನಿನಗಾಗಿ, ಮರೆಯಲಿ ಹ್ಯಾಂಗ, ಉಭಯ ಕುಶಲೋಪರಿ ಸಾಂಪ್ರತ, ಹಾಡು ಹುಟ್ಟಿದ ಸಮಯ ಎಂಬ ಅಂಕಣಗಳನ್ನು ಬರೆದಿದ್ದಾರೆ. ಇವರ ಬರೆದಿರುವ ಕೃತಿಗಳೆಂದರೆ ಅಮ್ಮ ಹೇಳಿದ ಎಂಟು ಸುಳ್ಳುಗಳು, ಹಾಡು ಹುಟ್ಟಿದ ಸಮಯ, ಅಪ್ಪ ಅಂದ್ರೆ ಆಕಾಶ, ಭಾವ ತೀರ ಯಾನ, ಮನಸು ಮಾತಾಡಿತು ಮುಂತಾದವು. ಇವರ ಅಮ್ಮ ಹೇಳಿದ ...
READ MORE