‘ನಾವು ಶಿಕ್ಷಕರು ಬದಲಾಗೋಣ’ ಡಾ.ಮಹಾಬಲೇಶ್ವರ ರಾವ್ ಅವರ ಕೃತಿಯಾಗಿದೆ. ಇದಕ್ಕೆ ಲೇಖಕರ ಬೆನ್ನುಡಿ ಬರಹವಿದೆ; ಈಚಿನ ಒಂದೆರಡು ವರ್ಷಗಳಲ್ಲಿ ನಾನು ವಿವಿಧ ವೇದಿಕೆಗಳಿಂದ ನೀಡಿದ ಶೈಕ್ಷಣಿಕ ಉಪನ್ಯಾಸಗಳನ್ನು ಆಧರಿಸಿ ಸಿದ್ದಪಡಿಸಿದ ಲೇಖನಗಳು. ಶಿಕ್ಷಕರ ಶಿಕ್ಷಣ, ಮೌಲ್ಯ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ 2020, ಪಠ್ಯಪುಸ್ತಕ ರಚನೆಯ ವಿವಾದಗಳು, ಸಂರಚನವಾದ, ಆಪ್ತ ಸಮಾಲೋಚನೆ, ಖ್ಯಾತ ಶಿಕ್ಷಣ ಚಿಂತಕರಾದ ಅಂಬೇಡ್ಕರ್, ಜೆ.ಕೆ. ಹಾಗೂ ಜೆ.ಪಿ.ನಾಯ್ಕರ ಶಿಕ್ಷಣ ವಿಚಾರಧಾರೆ ಇತ್ಯಾದಿ ಪ್ರಮುಖ ವಿಷಯಗಳ ಮೇಲೆ ಬೆಳಕು ಚೆಲ್ಲುವ ಈ ಸಂಕಲನವನ್ನು ಬದಲಾಗಲು ಬಯಸುವವರು ಸ್ವಾಗತಿಸುವರೆಂದು ನಂಬಿದ್ದೇನೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE