ಕಾಂತಾವರದ ಕನ್ನಡ ಸಂಘವು 'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ ಅಡಿಯಲ್ಲಿ ಪ್ರಕಟಿಸಿದ 188ನೇ ಪುಸ್ತಕ ನಿರ್ಕಜೆ ತಿರುಮಲೇಶ್ವರ ಭಟ್. ಲೇಖಕ ನೀರ್ಕಜೆ ತಿರುಮಲೇಶ್ವರ ಭಟ್ ಅವರು ಮೂಲತಃ ಬಂಟ್ವಾಳ ತಾಲೂಕಿನ ನೀರ್ಕಜೆಯವರು. ತಂದೆ - ನೀರ್ಕಜೆ ಮಹಾಲಿಂಗ ಭಟ್ಟ, ತಾಯಿ - ದೇವಕಿ ಅಮ್ಮ. ವಿಟ್ಲದ ವಿಠಲ ಹೈಸ್ಕೂಲಿನಲ್ಲಿ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ, ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಸೈನ್ಸ್ ಓದಿಕೊಂಡರು, ಅದೇ ಕಾಲೇಜಿನಲ್ಲಿ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸದಲ್ಲಿ ಬಿ.ಎ ಪದವಿ ಪಡೆದರು. 1959ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ, ಜರ್ಮನಿಯ ಮ್ಯೂನಿಕ್ ವಿಶ್ವವಿದ್ಯಾಲಯದಲ್ಲಿ ಗ್ರೋಸೆಸ್ ಶ್ಟ್ರಾಖ್ ಡಿಪ್ಲೋಮಾ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ಬಿ.ಶೋತ್ರಿ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಎಂ.ಜಿ.ಎಂ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಟ್ಯೂಟರ್ ಆಗಿ ವೃತ್ತಿ ಆರಂಭಿಸಿ, ಉಪನ್ಯಾಸಕ, ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಉಪನಿರ್ದೇಶಕ, ಜಾನಪದ ಅಧ್ಯಯನ ಕೇಂದ್ರ ನಿರ್ದೇಶಕರಾಗಿಯೂ ಸೇವೆಸಲ್ಲಿಸಿದ್ದಾರೆ. ಇಂಡೋ ಜರ್ಮನ್ ಸೊಸೈಟಿಯ ಸ್ಥಾಪಕ ಕಾರ್ಯದರ್ಶಿಯಾಗಿದ್ದಾರೆ. ಜರ್ಮನ್ ಭಾಷಾತಜ್ಞ, ಶ್ರೇಷ್ಠ ಅನುವಾದಕ ಎಂದೇ ಖ್ಯಾತಿಯ ಇವರ ಪ್ರವಾಸ ಕಥನ ‘ಜರ್ಮನಿಯಲ್ಲಿ ಎರಡು ತಿಂಗಳು’ ಕೃತಿ ಉದಯವಾಣಿಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದೆ. ಕು.ಶಿ. ಹರಿದಾಸ ಭಟ್ಟ, ದೊರಕಿದ ದಾರಿ, ಶಾಸ್ತ್ರಪ್ರಯೋಗ ಸೇರಿದಂತೆ ಹಲವು ಕನ್ನಡ ಕೃತಿಗಳನ್ನು ರಚಿಸಿದ್ದು, ಕನ್ನಡದಿಂದ ಜರ್ಮನ್ ಭಾಷೆಗೆ ಮತ್ತು ಇಂಗ್ಲಿಷ್ ಭಾಷೆಗೆ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರೆ. ಅವರನ್ನು ಪರಿಚಯಿಸುವ ಪುಸ್ತಕ.
©2024 Book Brahma Private Limited.