ಆರೋಗ್ಯದಲ್ಲಿ ಸಣ್ಣ ಏರುಪೇರಾದರೂ ಜನರು ಔಷಧ ಸೇವನೆಯ ಮೇಲೆ ವಿಪರೀತವಾಗಿ ಅವಲಂಬಿತರಾಗುತ್ತಿದ್ಧಾರೆ. ಆದರೆ, ಇದರಿಂದ ಮಹಾ ಅಪಾಯಕ್ಕೆ ಕಾರಣವಾಗುತ್ತದೆ, ಅಡ್ಡ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಯೋಚಿಸುವುದಿಲ್ಲ. ಇಂದು ನೂರಾರು ಕಂಪೆನಿಗಳು ತಮ್ಮ ಲಾಭದಾಸೆಗೆ ಔಷಧಗಳ ಬಗ್ಗೆ ಆಕರ್ಷಣೀಯವಾದ ಪ್ರಚಾರ ನೀಡಿ ವೈದ್ಯರನ್ನು ಕೇಳದೆಯೇ ಔಷಧ ತೆಗೆದುಕೊಳ್ಳುವಂತೆ ಪ್ರಚೋದಿಸುತ್ತಿವೆ. ಆದರೆ, ಇದು ಅನಗತ್ಯ ಸಮಸ್ಯೆಗಳಿಗೆ ಕಾರಣವಾಗಲಿದ್ದು, ಇಂತಹ ಸೂಕ್ಷ್ಮ ವಿಷಯಗಳನ್ನು ಇಲ್ಲಿ ಲೇಖಕರು ಚರ್ಚಿಸಿದ್ದಾರೆ. 2020ರ ಡಾ. ಪಿ.ಎಸ್.ಶಂಕರ್ ಪ್ರತಿಷ್ಠಾನದ ‘ಶ್ರೇಷ್ಟ ವೈದ್ಯಸಾಹಿತ್ಯ ಪ್ರಶಸ್ತಿ’ಗೆ ಈ ಕೃತಿ ಭಾಜನವಾಗಿದೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE