ಆಫ್ರಿಕಾದ ಗಾಂಧಿ ಎಂದೇ ಕರೆಯಲ್ಪಡುವ ನೆಲ್ಸನ್ ಮಂಡೇಲಾ, ಅವರ ಅಧಿಕಾರದ ಅವಧಿಯನ್ನು ‘ಭರವಸೆ ಹಾಗೂ ಸೌಹಾರ್ದತೆಯ ಸುವರ್ಣ ಯುಗ‘ ಎಂದು ಕರೆಯಲ್ಪಟ್ಟಿದೆ. ನೊಬೆಲ್ ಶಾಂತಿ ಪ್ರಶಸ್ತಿ, ಭಾರತ ರತ್ನ ಪ್ರಶಸ್ತಿ ಸೇರಿದಂತೆ ಅವರಿಗೆ 250ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ. ಈ ಮಹಾನ್ ನಾಯಕನ ಬಾಲ್ಯ-ಜೀವನ ಪ್ರೀತಿ-ಬದುಕು-ಸಾಧನೆಯನ್ನು ಈ ಕೃತಿಯಲ್ಲಿ ಸವಿವರವಾಗಿ ನೀಡಿದ್ದಾರೆ ಲೇಖಕ ರಂಜಾನ್ ದರ್ಗಾ.
ಲೇಖಕ ರಂಜಾನ್ ದರ್ಗಾ ಅವರು ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದವರು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರ ಪ್ರಗತೀಪರ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ಕಾವ್ಯ ಬಂತು ಬೀದಿಗೆ, ಹೊಕ್ಕುಳಲ್ಲಿ ಹೂವಿದೆ, ಬಸವಣ್ಣನವರ ದೇವರು, ಬಸವ ಧರ್ಮದ ವಿಶ್ವ ಸಂದೇಶ, ನಡೆ ನುಡಿ ಸಿದ್ದಾಂತ, ವಚನ ವಿವೇಕ ಸೇರಿದಂತೆ ಹಲವಾರು ಕೃತಿಗಳನ್ನ ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ವಚನ ಚಿಂತಕ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ರಂಜಾನ್ ದರ್ಗಾ ಅವರಿಗೆ ಸಂದಿವೆ. ಪ್ರಶಸ್ತಿಗಳು: 2022ನೇ ಸಾಲಿನ ಕರ್ನಾಟಕ ...
READ MORE