ಲೇಖಕ ಡಾ. ಜೆ.ಆರ್. ಲಕ್ಷ್ಮಣರಾವ್ ಅವರು ಬರೆದ ಕೃತಿ-ನೆನಪಿನ ಅಲೆಗಳು. ಇದೊಂದು ಆತ್ಮಕಥನ. ವಿಜ್ಞಾನ ಲೇಖನಗಳನ್ನು ಬರೆಯುವ ಮೂಲಕ ಜನಮಾನಸದಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸುವತ್ತ ಆಸಕ್ತಿ ಹೊಂದಿದ್ದ ಲೇಖಕರು ಕನ್ನಡ ವಿಜ್ಞಾನ ಸಾಹಿತ್ಯ ವಲಯಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದು, ಅವರು ತಮ್ಮ ಜೀವನದ ಹಾದಿಯನ್ನು ವಿಶ್ಲೇಷಿಸಿಕೊಂಡ ಕೃತಿ ಇದು.
ಜಗಳೂರು ರಾಘವೇಂದ್ರರಾವ್ ಲಕ್ಷ್ಮಣರಾವ್ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಜೆ.ಆರ್. ಲಕ್ಷ್ಮಣರಾವ್ ಎಂದೇ ಚಿರಪರಿಚಿತರು. 1921 ಜನವರಿ 21 ರಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಜನಿಸಿದರು. ತಂದೆ ರಾಘವೇಂದ್ರ ರಾವ್ ಮತ್ತು ತಾಯಿ ನಾಗಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ಜಗಳೂರಿನಲ್ಲಿ ನಡೆಸಿದ ಅವರು ಪ್ರೌಢ ಶಾಲೆಯ ಅಭ್ಯಾಸ ದಾವಣಗೆರೆಯಲ್ಲಿ ಪೂರ್ಣಗೊಳಿಸಿದರು. ಈಗ ಯುವರಾಜ ಕಾಲೇಜು ಎಂದು ಕರೆಯಲಾಗುವ ’ಮೈಸೂರಿನಲ್ಲಿ ಇಂಟರ್ ಮೀಡಿಯೆಟ್ ಕಾಲೇಜ್’ ಅಧ್ಯಯನ ಮುಂದುವರೆಸಿದ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, ರಸಾಯನ ಶಾಸ್ತ್ರದಲ್ಲಿ ಎಮ್ಮೆಸ್ಸಿ ಪದವಿ ಪಡೆದರು. ತುಮಕೂರು ಇಂಟರ್ ಮೀಡಿಯೆಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯಾರಂಭ ಮಾಡಿದ ಅವರು ಬೆಂಗಳೂರಿನ ಸೇಂಟ್ರಲ್ ಕಾಲೇಜ್, ಶಿವಮೊಗ್ಗೆಯ ಸಹ್ಯಾದ್ರಿ ...
READ MORE