'ನೆನಪಿನ ಸೌಟು’ ಬಿ. ಮಹಾಬಲೇಶ್ವರರಾವ್ ಅವರ ಆತ್ಮಕತೆಯಾಗಿದೆ. ತಮ್ಮ ಒಟ್ಟು ಬಾಳಿನ ಕುರಿತು ಅವರು ಹೇಳಬಹುದಾದ್ದು? ಮಹಾಬಲೇಶ್ವರರಾವ್ ಬರೆಯುತ್ತಾರೆ: "ಸ್ವಮೌಲ್ಯ ಮಾಪನದಲ್ಲಿ ನಾನು ಯಾವತ್ತೂ ಹಿಂದೆ ಬಿದ್ದಿಲ್ಲ. ನನ್ನ ಹಲವಾರು ತಪ್ಪುಗಳನ್ನು ತಿದ್ದಿಕೊಂಡಿದ್ದೇನೆ. ನಾನಿನ್ನೂ ಮಾಗಿಲ್ಲ. ಮಾಗುವುದು ಒಂದು ದೀರ್ಘಕಾಲೀನ ಪ್ರಕ್ರಿಯೆ. ಪೂರ್ತಿ ಮಾಗುವುದಕ್ಕೆ ಜೀವಮಾನ ಸಾಲದೇ ಹೋದೀತು!"(ಪುಟ 285). ಅಪ್ಪಟ ಪ್ರಾಮಾಣಿಕತೆಯ ನುಡಿಗಳಿವು.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE