‘ನೇರಳೆ ಐಸ್‌ಕ್ರೀಂ’ ಪ್ರಸಾದ ಶೆಣೈ ಆರ್. ಕೆ ಅವರ ಕತಾಸಂಕಲನವಾಗಿದೆ. ಮೇಲ್ನೋಟಕ್ಕೆ ಒಂದು ಬಗೆಯ ವರ್ಣನಾತ್ಮಕ ಗುಣ ಈ ನಿರೂಪಣೆಗಳಲ್ಲಿ ಎದ್ದು ಕಂಡರೂ, ಸೂಕ್ಷ್ಮವಾಗಿ ನೋಡಿದರೆ ಅದು ಆಯಾ ಜೀವಿಗಳ ಖಾಸಗೀ ಜೀವನದ ದಾರುಣತೆಯ ವಿರೋಧಾಭಾಸವನ್ನು ಧ್ವನಿಸುತ್ತದೆ. ಹಬ್ಬದ ನೆಪದಲ್ಲಿ ಪುರಾಣದ ವೇಷಗಳನ್ನು ತೊಟ್ಟುಕೊಂಡು ಮನೆಮನೆಗೆ ಕಾಣಿಕೆಗಾಗಿ ಅಲೆಯುವುದು, ಕಲ್ಲಣಬೆಯ ರುಚಿ ಏನೆಂದೇ ತಿಳಿಯದವ ಅದನ್ನು ಅಲೆದಾಡಿ ಹಕ್ಕಿ ತಂದು ತನಗಾಗಿ ಒಂದನ್ನೂ ಉಳಿಸಿಕೊಳ್ಳದೇ ಪುಡಿಗಾಸಿಗೆ ಮಾರುವುದು, ಸಾರ್ವಜನಿಕರ ಕಣ್ಣಲ್ಲಿ ಏರುತ್ತ ಹೋದ ಕಲಾವಿದ ಆತ್ಮಮೋಹದ ನರಕಕ್ಕೆ ಜಾರುವುದು, ಇಂಥ ವಿರೋಧಾಭಾಸಗಳು ಈ ಕತೆಗಳ ಮುಖ್ಯ ಲಕ್ಷಣಗಳಾಗಿವೆ. ಹೀಗೆ ಅನೇಕ ಕತೆಗಳನ್ನೊಳಗೊಂಡ ಕೃತಿ ಇದಾಗಿದೆ.