ಕವಯತ್ರಿ ಆರ್. ಸುನಂದಮ್ಮ ಅವರ ಕವನಗಳ ಸಂಕಲನ- ನೆತ್ತಿ ಸುಟ್ಟ ಕಾಲ. ಕಥೆ-ಕಾದಂಬರಿ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿರುವ ಲೇಖಕಿಯು ಕವನಗಳ ಮೂಲಕ ತಮ್ಮ ಭಾವಗಳಿಗೆ ಅಭಿವ್ಯಕ್ತಿ ನೀಡಿದ್ದಾರೆ, ವೈವಿಧ್ಯಮಯ ವಸ್ತು, ಆಕರ್ಷಕ ಹಾಗೂ ಪರಿಣಾಮಕಾರಿ ನಿರೂಪಣಾ ಶೈಲಿಯಿಂದ ಇಲ್ಲಿಯ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ.
ಸಂವೇದನಾಶೀಲ ಸ್ತ್ರೀವಾದಿ ಲೇಖಕಿ ಪ್ರೊ.ಆರ್.ಸುನಂದಮ್ಮ ಅವರು ಮೂಲತಃ ಕೋಲಾರ ಜಿಲ್ಲೆಯ ವೆಂಕಟಾಪುರದವರು. ಕತೆ, ಕಾವ್ಯ, ಕಾದಂಬರಿ, ಸಂಶೋಧನಾ ಮತ್ತು ವೈಚಾರಿಕ ಲೇಖನಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ 2003ರಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಸೇರ್ಪಡೆಯಾದ ಅವರು, ಉಪನ್ಯಾಸಕಿಯಾಗಿ, ರೀಡರ್ ಆಗಿ, ಸಹ ಪ್ರಾಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನಕದಾಸ ಅಧ್ಯಯನ ಪೀಠದ ಸಂಯೋಜಕರಾಗಿ, ಎರಡು ಅವಧಿಗೆ ಆರ್ಥಿಕ ಅಧಿಕಾರಿಗಳಾಗಿ, ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಯಾಗಿರುವ ದೇಶದ ಮೊಟ್ಟಮೊದಲ ಮಹಿಳಾ ವಸ್ತು ...
READ MORE