ನಮ್ಮ ಜೀವನದಲ್ಲಿ ಹಲವಾರು ಬಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಬರುತ್ತದೆ. ಆಗ ನಾವು ತೆಗೆದುಕೊಳ್ಳುವ ನಿರ್ಧಾರದಿಂದ ನಮಗೂ ಮತ್ತು ನಮ್ಮ ಸುತ್ತಲಿನವರಿಗೂ ಒಳ್ಳೆಯದಾಗಬೇಕು. ಅಲ್ಲಿ ತಪ್ಪು ಹೆಜ್ಜೆ ಇಡದೇ ನಮ್ಮ ಕರ್ತವ್ಯ, ಸಮಾಜದ ನಿರೀಕ್ಷೆಗಳಿಗೆ ಹಿತವಾದ ನಿರ್ಧಾರ ಕೈಗೊಳ್ಳಲು ಈ ಕೈಪಿಡಿ ಮಾರ್ಗದರ್ಶಿಯಾಗಿ ನಿಲ್ಲುತ್ತದೆ. ಕೃತಿಯ ಕರ್ತೃ ಡಾ. ಸಿ.ಆರ್. ಚಂದ್ರಶೇಖರ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE