'ನಿನಗಾಗಿ ಬರೆದ ಕವಿತೆಗಳು' ಎಚ್.ಎಸ್.ಮುಕ್ತಾಯಕ್ಕ ಅವರ ಹೊಸ ಸಂಕಲನ. ಈ ಕೃತಿಯನ್ನು 'ಸಂಗಾತ ಪುಸ್ತಕ' ಪ್ರಕಟಿಸಿದೆ. ಇದು ಪ್ರೇಮ ಪದ್ಯಗಳ ಸಂಕಲನ. ಈ ಪದ್ಯಗಳು ಓದುತ್ತ ಗಾಢ ಪ್ರೇಮದ ಹೂದೋಟದಲ್ಲಿ ಕಳೆದು ಹೋಗುವಂತೆ ಮಾಡುತ್ತವೆ. ಈ ಸಂಕಲನ ಪ್ರೇಮಿಗಳ ಉಸಿರಾಟದ ಪಲುಕುಗಳಂತಿವೆ. ಪ್ರತಿ ಪುಟದಲ್ಲಿಯೂ ಆವರಿಸಿರುವ ಪ್ರೇಮ ಪದ್ಯಗಳು ನಮ್ಮವೇ ಅನ್ನಿಸುತ್ತವೆ.
ಎಚ್.ಎಸ್. ಮುಕ್ತಾಯಕ್ಕ ಅವರು 1954 ಜನವರಿ 28ರಂದು ಜನಿಸಿದರು. ಇವರು ಬರೆದ ಪ್ರಮುಖ ಕೃತಿಗಳೆಂದರೆ ನಾನು ಮತ್ತು ಅವನು, ನೀವು ಕಾಣಿರೇ ನೀವು ಕಾಣಿರೇ, ಡಕ್ಕೆಯ ಬೊಮ್ಮಣ್ಣ, ಶಿವಶರಣೆ ಮುಕ್ತಾಯಕ್ಕ, ಕಭೀ ಕಭೀ ಮುಂತಾದವು. ಇವ ನೀವು ಕಾಣಿರೇ ನೀವು ಕಾಣಿರೇ ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ರತ್ಮಮ್ಮ ಹೆಗ್ಗಡೆ ದತ್ತಿ ನಿಧಿ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ. ...
READ MORE