'ನಿನ್ನೊಲುಮೆ ನನಗಿರಲಿ' ಆರತಿ ವೆಂಕಟೇಶ್ ಅವರ ಕಾದಂಬರಿಯಾಗಿದೆ. ಈ ಕಾದಂಬರಿಯ ಮುಖ್ಯ ಪಾತ್ರಧಾರಿ ಒಬ್ಬ ಮಹಿಳಾ ಮೂಳೆ ತಜ್ಞ ವೈದ್ಯೆ. ವೈದ್ಯಕೀಯ ಕ್ಷೇತ್ರದಲ್ಲಿ ಮೂಳೆ ತಜ್ಞರಾಗಿ ಮಹಿಳೆ ಕೆಲಸ ಮಾಡುವುದು ವಿರಳ. ಅಂಥ ಒಬ್ಬ ವೈದ್ಯೆಯ ಬದುಕಿನ ಸುತ್ತ ನಡೆಯುವ ನಿಗೂಢ ಘಟನೆಯ ಚಿತ್ರಣ ಈ ಕಾದಂಬರಿಯಲ್ಲಿದೆ.
ಕಾದಂಬರಿಗಾರ್ತಿ ಆರತಿ ವೆಂಕಟೇಶ್ ಅವರು 1964 ಫೆಬ್ರವರಿ 15ರಂದು ಜನಿಸಿದರು. ತಂದೆ ನವರತ್ನರಾಮ್, ತಾಯಿ ಉಷಾ ನವರತ್ನರಾಮ್. ’ಆಶಾಕಿರಣ, ಅಮೃತಬಿಂದು, ನಿನಗಾಗಿ ನಾನೋಡಿ ಬಂದೆ, ಜೀವನ ಸಂಧ್ಯಾ, ಅಗೋಚರ, ಮುಕುಕಿದೀ ಮಬ್ಬಿನಲಿ, ಮಾಫಲೇಶುಕದಾಚನ, ಯಾವ ಮುರಳಿ ಕರೆಯಿತು, ತಲ್ಲಣಿಸದಿರು ಮನವೆ, ಧರಿತ್ರಿ’ ಮುಂತಾದ 30ಕ್ಕೂ ಹೆಚ್ಚು ಕಾದಂಬರಿ ರಚಿಸಿದ್ದಾರೆ. ...
READ MORE