‘ನೀರಿನೊಳಗಣ ಕೆಂಡ’ ಕೆ.ವಿ. ರಾಜೇಶ್ವರಿಯವರ ಸಾಮಾಜಿಕ ಕಾದಂಬರಿಯಾಗಿದೆ. ಇದಕ್ಕೆ ಲೇಖಕರ ಬರಹವಿದೆ; 'ನೀರಿನೊಳಗಣ ಕೆಂಡ' ನಾಲ್ಕು ಜನ ಸ್ನೇಹಿತೆಯರ ಜೀವನದ ಚಿತ್ರಣ ಕೊಡುವ ಕಾದಂಬರಿ ಇಲ್ಲಿ ಬರುವ ನಾಲ್ವರೂ ಹೆಣ್ಣಿನ ನಾಲ್ಕು ಪರಿಸ್ಥಿತಿಗಳಿಗೆ ಉದಾಹರಣೆಯಾಗಿ ನಿಲ್ಲಬಲ್ಲವರು. ಇವರ ಕಷ್ಟ ಸುಖ, ಜೀವನದ ಏರಿಳಿತಗಳಿಂದ ಇವರು ಬಹಳಷ್ಟು ಭಾರತೀಯ ನೀರೆಯರ ಪರಿಸ್ಥಿತಿಗಳಿಗೆ ಕನ್ನಡಿ ಹಿಡಿಯುವಂತಿದ್ದಾರೆ. ಇದು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರ ಮನೆಗಳಲ್ಲಿ ಇರುವ ಪರಿಸ್ಥಿತಿ ಎಂಬುವುದನ್ನು ಈ ಪುಸ್ತಕದಲ್ಲಿ ನೋಡಬಹುದು.
ಕಾದಂಬರಿಗಾರ್ತಿ ರಾಜೇಶ್ವರಿ ಕೆ. ವಿ. ಅವರು ಕನ್ನಡದ ಜನಪ್ರಿಯ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಅಂಚೆ ಕಛೇರಿಯಲ್ಲಿ ವೃತ್ತಿ ಆರಂಭಿಸಿದ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಂದೆ ವೆಂಕಟಪತಿ, ತಾಯಿ ಸಾವಿತ್ರಮ್ಮ. ‘ಬಾಳೆಂಬ ದೋಣಿ, ವಂಶೋದ್ದಾರಕ, ಮಧೂಲಿಕ, ಚಿಗುರಿದ ಕುಡಿ, ಪಂಜರದ ಗಿಳಿ, ಸೌಂದರ್ಯ, ಮೊದಲ ಮೆಟ್ಟಿಲು, ಸೂತ್ರಧಾರ, ಹೊಸ ಬದುಕು, ಹರ್ಷದ ಹೊನಲು, ಹೊನ್ನ ಹರಿಗೋಲು’ ಕಾದಂಬರಿಗಳನ್ನು ರಚಿಸಿದ್ದಾರೆ. ಅವರು ಕಾದಂಬರಿಗಳಲ್ಲದೆ ವಾಸ್ತುಶಿಲ್ಪ, ವಿಜ್ಞಾನ, ಹೊಲಿಗೆ, ಪಾಕಶಾಸ್ತ್ರ, ಹಾಸ್ಯ, ಕಾವ್ಯ, ಕಂಪ್ಯೂಟರ್ ಮೊದಲಾಗಿ ವಿಷಯ ವಸ್ತುಗಳಿಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ...
READ MORE