ಕವಿ ನಿಷ್ಠಿ ರುದ್ರಪ್ಪ ಅವರು ಬರೆದ ಆಧುನಿಕ ವಚನಗಳ ಕೃತಿ-ನಿಷ್ಠಿಯ ನೂರೆಂಟು ವಚನಗಳು. ವಚನ ಸಾಹಿತ್ಯದ ಅಧ್ಯಯನದ ಫಲವಾಗಿ ಮೂಡಿಬಂದ ಈ ಆಧುನಿಕ ವಚನಗಳ ಸಂಕಲನದಲ್ಲಿ ಒಟ್ಟು 122 ವಚನಗಗಳಿವೆ. ವಿವಿಧ ವಸ್ತು ವಿಷಯಗಳನ್ನಾಧರಿಸಿ ಮಾನವನ ನೈತಿಕ ಬದುಕಿಗೆ ಸೂರ್ಯ ಚಂದ್ರ ಇರುವತನಕವೂ ಬೇಕಾಗಿರುವ ಮಾನವೀಯ ಮೌಲ್ಯಗಳ ಪ್ರತಿಪಾದನೆಯನ್ನು ಈ ವಚನಗಳು ಮಾಡುತ್ತವೆ.
ಲೇಖಕ ನಿಷ್ಠಿ ರುದ್ರಪ್ಪ ಅವರು ಮೂಲತಃ ಬಳ್ಳಾರಿಯವರು. ತಂದೆ ನಿಷ್ಠಿ ಬಸವರಾಜಪ್ಪ, ತಾಯಿ ಪ್ರಭಾವತಿ. ಬಿ.ಕಾಂ, ಎಂ.ಎ, ಬಿ.ಇಡಿ ಪದವೀಧರರು. ಸ್ಮಾತಕೋತ್ತರ ವಚನ ಕಮ್ಮಟ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್‍ಯಾಂಕ್, ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು, ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯರು. ಖಾಸಗಿ ಕಂಪನಿಯಲ್ಲಿ ಸೇವೆ, ಬಳ್ಳಾರಿಯ ಲೋಕದರ್ಶನ ಪತ್ರಿಕೆಯಲ್ಲಿ ವರದಿಗಾರರಾಗಿ, ಬಳ್ಳಾರಿಯ ವೈದ್ಯಕೀಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಾರಿ ಹಾಗೂ ಕಲ್ಪತರು ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಹೊಸಪೇಟೆಯ ಆಕಾಸವಾಣಿ ಕೇಂದ್ರದಿಂದ ‘ಚಿಂತನೆ’ ಹಾಗೂ ಹಚ್ಚೇವು ಕನ್ನಡದ ದೀಪ’ ದೂರದರ್ಶನದಲ್ಲಿ ...
READ MORE