ಈ ಕೃತಿಯಲ್ಲಿ ಕನ್ನಡ ಸಾಹಿತ್ಯದ ಗ್ರಹಿಕೆಯನ್ನು ವೈಚಾರಿಕ ನೆಲೆಯಲ್ಲಿ ವಿಶ್ಲೇಷಿಸಲಾಗಿದೆ. ಲೇಖನಗಳಲ್ಲಿರುವ ವೈಚಾರಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಿಂತನೆಗಳು ಆಳವಾದ ಶೋಧನೆ ಮತ್ತು ವೈಚಾರಿಕ ದೃಷ್ಟಿಕೋನಗಳು ನಿಜದ ನೆಲೆಯನ್ನು ವರ್ತಮಾನದಲ್ಲಿ ಕಾಣುವ ಹಂಬಲವನ್ನು ಹೊತ್ತಿವೆ. ಇಲ್ಲಿಯ ಬರಹಗಳು ಆಧುನಿಕ ಸಾಹಿತ್ಯದ ಸಂಸ್ಕೃತಿ ವಿಮರ್ಶಾಲೋಕಕ್ಕೆ ಹೊಸತಾದ ನೆಲೆಬೆಲೆಯನ್ನು ಒದಗಿಸುತ್ತವೆ. ಈ ಕೃತಿಯು ಹೊಂದಿರುವ ಅಧ್ಯಾಯಗಳೆಂದರೆ: ಸಾಹಿತ್ಯ , ವಿಚಾರ , ವ್ಯಕ್ತಿ
'ಚಂಪಾ' ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ-ನಾಟಕಕಾರ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ’ಚಂಪಾ’ ಅವರದು. ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು (1939). ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ. ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ, ಹಾವೇರಿಯಲ್ಲಿ ಹೈಸ್ಕೂಲು ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ 'ಚಂಪಾ' ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು. ’ನಮಗೆಲ್ಲ ...
READ MORE