ವೃತ್ತಿಯಲ್ಲಿ ವೈದ್ಯೆಯಾಗಿರುವ ಡಾ.ಎಚ್.ಎಸ್.ಅನುಪಮ ಅವರ ಅಂಕಣ ಬರಹಗಳ ಸಂಗ್ರಹವಾಗಿ ’ ನೋಯುವ ಹಲ್ಲಿಗೆ, ಹೊರಳುವ ನಾಲಿಗೆ’ ಕೃತಿ ಹೊರಬಂದಿದೆ.
ಜೀವಪರ ಲೇಖಕಿ ಅನುಪಮ ಅವರು ಮಹಿಳಾ ಸಬಲೀಕರಣದ ಬಗ್ಗೆ ಬರೆದ ಅಂಕಣ ಬರಹಗಳ ಸಂಗ್ರಹವಿದು. ವೈದ್ಯೆಯಾಗಿ, ಹೋರಾಟಗಾರ್ತಿಯಾಗಿ ಬದುಕಿನ ಗಾಢ ಅನುಭವವಿರುವ ಅನುಪಮ ತಮ್ಮ ಲೇಖನಗಳ ಮೂಲಕವೂ ಸಾಮಾಜದ ಆಗುಹೋಗುಗಳಿಗೆ ತೀವ್ರವಾಗಿ ಸ್ಪಂದಿಸುವವರು ಹಾಗಾಗಿ ಈ ಕೃತಿ ಮುಖ್ಯವೆನಿಸುತ್ತದೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE