ಹಿರಿಯ ಲೇಖಕ ಲಿಂಗಾರೆಡ್ಡಿ ಸೇರಿ ಅವರ ವಿಮರ್ಶಾ ಲೇಖನಗಳ ಸಂಕಲನ-ಓದಿನ ಬೊಗಸೆ. ಒಟ್ಟು 18 ವಿಮರ್ಶಾತ್ಮಕ ಲೇಖನಗಳನ್ನು ಸಂಕಲಿಸಲಾಗಿದೆ. ಸಂಶೋಧಕ ಡಾ.ಕಲ್ಯಾಣರಾವ ಜಿ. ಪಾಟೀಲರು ಮುನ್ನುಡಿ ಬರೆದು ‘ಇಲ್ಲಿಯ ಪ್ರತಿಯೊಂದು ಲೇಖನದ ಹಿಂದೆ ಅಧ್ಯಯನಕ್ಕೆ ಸಮರ್ಪಿಸಿಕೊಂಡ ಲೇಖಕರ ವಿನಮ್ರತಾ ಸ್ವಭಾವ, ಬಹುಶ್ರುತ ವಾಚನಾಭಿರುಚಿ, ವಿಸ್ತ್ರತ ಲೋಕಾನುಭವ, ಹೃದಯಸ್ಪರ್ಶಿ ಭಾವಾಭಿವ್ಯಕ್ತಿ ಎದ್ದು ಕಾಣುತ್ತದೆ’ ಎಂದು ಪ್ರಶಂಸಿಸಿದ್ದಾರೆ.
ಲೇಖಕ ಲಿಂಗಾರೆಡ್ಡಿ ಸೇರಿ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಜಾಕನಹಳ್ಳಿ ಗ್ರಾಮದವರು. ತಂದೆ ಬಸರೆಡ್ಡಿ, ತಾಯಿ ವೀರಮ್ಮ. ಜಾಕನಹಳ್ಳಿ, ಕೊಲಕುಂದಾ ಹಾಗೂ ಮದನಾ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಪೂರೈಸಿದರು. ಕಲಬುರಗಿಯ ಎಸ್.,ಬಿ. ಕಲಾ ಮಹಾವಿದ್ಯಾಲಯದಲ್ಲಿ ಪಿಯುಸಿ, ಕರ್ನಾಟಕ ವಿವಿ ಯಿಂದ ಬಿ.ಎ, ಹಾಗೂ ಬೆಂಗಳೂರು ವಿ.ವಿ.ಯಿಂದ ಬಿ.ಇಡಿ, ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಿಂದ ತೆಲುಗು ಭಾಷೆಯಲ್ಲಿ ಡಿಪ್ಲೊಮಾ ಹಾಗೂ ಕರ್ನಾಟಕ ವಿ.ವಿ.ಯಿಂದ ಎಂ.ಎ. (ಬಾಹ್ಯ) ಪದವೀಧರರು. ಸಿರಿಗೆರೆಯ ಶ್ರೀ ತರಳಬಾಳು ವಿದ್ಯಾ ಸಂಸ್ಥೇಯಲ್ಲಿ ಶಿಕ್ಷಕ ವೃತ್ತಿ ಆರಂಭ, ನಂತರ ಅವರು ಕಡಕೋಳ, ತೂಲಹಳ್ಳಿ, ರಾಣೇಬೆನ್ನೂರು ಹೀಗೆ ...
READ MORE