ʼಒಗ್ಗಟ್ಟಿನಲ್ಲಿ ಬಲವಿದೆʼ ಮಕ್ಕಳ ಕಥಾ ಪುಸ್ತಕವನ್ನು ಲೇಖಕಿ ಸಂಧ್ಯಾ ಪೈ ಅವರು ರಚಿಸಿದ್ದಾರೆ. ಈ ಪುಸ್ತಕವು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹೊರಬಂದಿದೆ. ಪುಟ್ಟ ಪುಟ್ಟಿಯರಿಗಾಗಿ ಪುಟ್ಟ ಕಥೆ ಎಂಬ ಅಡಿಶೀರ್ಷಿಕೆಯಲ್ಲಿ ಈ ಪುಸ್ತಕವು ಪ್ರಕಟವಾಗಿದೆ. ಇದರ ಇಂಗ್ಲೀಷ್ ಅವತರಣಿಕೆಯು strenth in english ಎಂಬ ಹೆಸರಿನಿಂದ ಪ್ರಕಟವಾಗಿದೆ.
ಮಣಿಪಾಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ವಿಭಾಗದ ಗೌರವ ನಿರ್ದೇಶಕಿಯಾಗಿರುವ ಸಂಧ್ಯಾ ಎಸ್. ಪೈ ಅವರು ಪತ್ರಿಕೋದ್ಯಮಿ, ಲೇಖಕಿ. ತರಂಗ ವಾರಪತ್ರಿಕೆ ಸೇರಿದಂತೆ ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ನ ನಾಲ್ಕು ಪತ್ರಿಕೆಗಳಿಗೆ ಸಂಪಾದಕಿ ಆಗಿದ್ದಾರೆ. ಸಂಧ್ಯಾ ಅವರು ಜನಿಸಿದ್ದು ಚಿಕ್ಕಮಗಳೂರಿನಲ್ಲಿ 1947ರ ಫೆಬ್ರುವರಿ 26ರಂದು. ತಂದೆ ಬಿ. ನಾರಾಯಣ ಬಾಳಿಗಾ ಹಾಗೂ ತಾಯಿ ಸುಮಿತ್ರಾದೇವಿ. ಇದು ಈಜಿಪ್ಟ್ ಇದು ಇಸ್ರೇಲ್ (ಪ್ರವಾಸ ಕಥನ), ಸಂಪಾದಕೀಯ ಅಂಕಣಗಳಾದ ’ಪ್ರಿಯ ಓದುಗರೇ’ ಬರಹಗಳ 10 ಸಂಪುಟಗಳು ಪ್ರಕಟವಾಗಿವೆ. ಕೊಂಕಣಿ ರಾಂದಪ (ಕನ್ನಡ, ಇಂಗ್ಲಿಷ್ ಆವೃತ್ತಿ). ಯಕ್ಷಪ್ರಶ್ನೆ, ಪರಂಪರೆಯ ಪುಟಗಳಿಂದ (ಭಾರತೀಯ ಧಾರ್ಮಿಕ-ಸಾಂಸ್ಕೃತಿಕ ಮೌಲ್ಯಗಳ ...
READ MORE