ಚಿಂತಕ ಪಾ.ವೆಂ. ಆಚಾರ್ಯ ಅವರ ಕುರಿತು ಲೇಖಕ ವೈ.ಎನ್. ಗುಂಡೂರಾವ್ ಅವರು ಬರೆದ ಕೃತಿ ಇದು. ಭಾರತ-ಭಾರತಿ ಪುಸ್ತಕ ಸಂಪದ ಭಾಗ-2ರ ಅಡಿ ಈ ಕೃತಿ ಪ್ರಕಟಿಸಲಾಗಿದೆ. ಮಕ್ಕಳಿಗೂ ಸಹ ತಿಳಿಯುವ ರೀತಿಯಲ್ಲಿ ಸಂದರ್ಭಕ್ಕನುಸಾರವಾಗಿ ಆಕರ್ಷಕವಾಗಿ ಚಿತ್ರಗಳೊಂದಿಗೆ ವಿಷಯ ನಿರೂಪಣೆ ಇದ್ದು, ಪಾ.ವೆಂ. ಆಚಾರ್ಯರ ಜೀವನ ಚಿತ್ರಣವನ್ನು ತುಂಬಾ ಪರಿಣಾಮಕಾರಿಯಾಗಿ ಬಿಂಬಿಸಲಾಗಿದೆ. ಈ ಕೃತಿಯ ಪ್ರಧಾನ ಸಂಪಾದಕರು-ಚಿರಂಜೀವಿ.
ಹಾಸ್ಯಪ್ರಬಂಧ ಲೇಖಕ, ಮಾಹಿತಿ ಸಂಗ್ರಾಹಕ, ಸಂಪಾದಕರಾದ ಗುಂಡೂರಾವ್ ಅವರು 1945 ಜೂನ್ 6ರಂದು ಈಗಿನ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಯರಗಂಬಳ್ಳಿಯಲ್ಲಿ ಹುಟ್ಟಿದರು. ನಿವೃತ್ತಿಯ ನಂತರ ಪೂರ್ಣ ಪ್ರಮಾಣದ ಸಾಹಿತ್ಯಾಭ್ಯಾಸ, ಬರೆಹದಲ್ಲಿ ತೊಡಗಿಕೊಂಡಿದ್ದಾರೆ. ಸದಭಿರುಚಿಯ ಹಾಸ್ಯ ಪ್ರಸಾರಕ್ಕಾಗಿ ಸ್ಥಾಪಿಸಿರುವ ‘ಹಾಸ್ಯಬ್ರಹ್ಮ ಟ್ರಸ್ಟ್’ನ ಸ್ಥಾಪಕ ಸದಸ್ಯರು. ಸಂಜೆ ಕಾಲೇಜಿಗೆ ಸೇರಿದಾಗ ದೊರೆತ ಸಾಹಿತಿ ಮಿತ್ರರ ಓಡನಾಟದಿಂದ ಸಾಹಿತ್ಯದ ಓದು, ಬರೆಹವನ್ನು ಅತಿ ಗಂಭೀರವಾಗಿ ತೆಗೆದುಕೊಂಡು ಪತ್ರಿಕೆಗಳಿಗೆ ಬರೆದ ಲೇಖನಗಳು. ಮೊದಲ ಲೇಖನ ಕಸ್ತೂರಿ ಮಾಸಪತ್ರಿಕೆ, ಮೊದಲ ಕತೆ ಇಂಚರ ಮಾಸ ಪತ್ರಿಕೆ ಹಾಗೂ ಮೊದಲ ಹಾಸ್ಯಲೇಖನ ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ...
READ MORE