ಅನನ್ಯ ಪ್ರೀತಿಗೆ ರೂಪಕವಾಗಿಯೇ ಇರುವ ನಳ-ದಮಯಂತಿಯರ ಕಥಾನಕವನ್ನು ಕಾತ್ಯಾಯಿನಿ ಅವರು ಸಶಕ್ತ ನಾಟಕವನ್ನಾಗಿ ಮಾಡಿದ್ದಾರೆ. ತಮ್ಮದೇ ಆದ ನೂತನ ಶೈಲಿಯಲ್ಲಿ ನಾಟಕಗಳನ್ನು ನೇಯ್ದಿದ್ದಾರೆ. ಇದು ಬರಿ ಪೌರಾಣಿಕ ವಸ್ತುವಿನ ಕಥೆಯಲ್ಲ. ಇದು ವರ್ತಮಾನದ ಬದುಕಿಗೆ ಕೈಚಾಚಿದ್ದರಿಂದ ಇದಕ್ಕೊಂದು ವಿಶೇಷತೆ ಇದೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE