‘ಪಳಕಳ ಸೀತಾರಾಮಭಟ್ಟ’ ಸಿವಿಜಿ ಪಬ್ಲಿಕೇಷನ್ಸ್ ನ ಮಕ್ಕಳ ಸಾಹಿತ್ಯ ನಿರ್ಮಾಪಕರು ಮಾಲೆಯಲ್ಲಿ ಪ್ರಕಟವಾದ ಕೃತಿ. ಖ್ಯಾತ ಮಕ್ಕಳ ಸಾಹಿತಿಗಳಾಗಿದ್ದ ಸೀತಾರಾಮಭಟ್ಟ ಅವರ ಬದುಕು-ಬರಹದ ಕುರಿತಾಗಿ ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಈ ಕೃತಿಯಲ್ಲಿ ವಿಶ್ಲೇಷಿಸಿದ್ದಾರೆ. ಮಕ್ಕಳಿಗಾಗಿ ರಚಿತವಾಗಿರುವ ಈ ಕೃತಿ ಮಕ್ಕಳಲ್ಲಿ ನಾಡುನುಡಿಯ ಬಗ್ಗೆ ಅರಿವು ಮೂಡಿಸಲು ನೆರವಾಗುತ್ತದೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE