‘ಪಂಚಮುಖಿ ಪಂಜಾಬ್’ ಜಿ.ಪಿ ಬಸವರಾಜ್ ಅವರ ಪ್ರವಾಸ ಕಥನವಾಗಿದೆ. ಪಂಜಾಬ್ ರಾಜ್ಯದ ಪ್ರವಾಸ ಕಥನ. ತನ್ನ ವೈಯಕ್ತಿಕ ಎನ್ನಬಹುದಾದ ಹೆಚ್ಚಿನ ಅಂಶಗಳನ್ನು ಬದಿಗೆ ಸರಿಸಿ ತಾನು ನೋಡಿದ ತಿಳಿದುಕೊಂಡ ವಿಷಯಗಳನ್ನು ಪ್ರಬಂಧಗಳ ರೂಪದಲ್ಲಿ ದಾಖಲಿಸಿದ ಅಪೂರ್ವ ಕೃತಿ.
ಹಿರಿಯ ಪತ್ರಕರ್ತ, ಸಾಹಿತಿ ಜಿ.ಪಿ ಬಸವರಾಜು ಅವರು ಹುಟ್ಟಿದ್ದು 1952 ಆಗಸ್ಟ್ 3ರಂದು. ಕತೆ, ಕವಿತೆ, ಪ್ರವಾಸ ಕಥನ, ವಿಮರ್ಶೆ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕ್ರಿಯಾಶೀಲರಾಗಿರುವ ಜಿ.ಪಿ. ಬಸವರಾಜು ಅವರು ಮೂರು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಬೆತ್ತಲೆಯ ಬೆಳಕನುಟ್ಟು, ಕೊಳ್ಳದ ಹಾದಿ, ಶಿಖರ ಸಾಲು, ಕಾಗೋಡು, ಕಾಡಿನ ದಾರಿ. ಅವರಿಗೆ ಪುತಿನ ಕಾವ್ಯ ಪ್ರಶಸ್ತಿ, ಜಿಎಸ್‍ಎಸ್ ಕಾವ್ಯ ಪ್ರಶಸ್ತಿ, ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, ಕಿ.ರಂ. ಪುರಸ್ಕಾರ ಮುಂತಾದ ಗೌರವ ಪ್ರಶಸ್ತಿಗಳು ಸಂದಿವೆ. ...
READ MORE