ಪಂಜಾಬಿ ಲೇಖಕ ಹರಭಜನ ಸಿಂಗ್ ಸಂಪಾದಿತ ಪಂಜಾಬಿ ಕಥೆಗಳನ್ನು ಗೌರೀಶ್ ಕಾಯ್ಕಿಣಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇಸ್ಪೀಟಿನ ಚಟ, ಮೈನಾ ಅತ್ತಿಗೆ, ಪ್ರೇಮಿಯ ಮಕ್ಕಳೂ, ಗರಿಕೆ ಹುಲ್ಲು, ಬೆಳಗಾಗುವ ತನಕ, ಕೊಡಲಿಯ ಹಂಗಾಮು, ಭಾರದ ಹಗ್ಗ, ಮುಳ್ಳು ಪೊದರಿನ ಟೊಂಗೆ, ಶೂಲದ ಮೇ;ಲೆ ತೂಗಿದ ಕ್ಷಣ, ವಂಚನೆ ಹೀಗೆ ಒಟ್ಟು 21 ಕಥೆಗಳು ಇಲ್ಲಿ ಸಂಕಲನಗೊಂಡಿವೆ. ಪಂಜಾಬಿನ ವಿವಿಧ ಲೇಖಕರು ಈ ಕಥೆಗಳನ್ನು ಬರೆದಿದ್ದು, ಅವುಗಳನ್ನು ಕನ್ನಡಕ್ಕೆ ಅನುವಾದಿಸಲಾಗಿದೆ.
ಸಾಹಿತಿ ಗೌರೀಶ್ ಕಾಯ್ಕಿಣಿ ಅವರು 1912 ಸೆಪ್ಟೆಂಬರ್ 12ರಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದರು. ತಂದೆ ವಿಠಲರಾವ್ ತಹಸೀಲ್ದಾರರು, ತಾಯಿ ಸೀರಾಬಾಯಿ. ಗೌರೀಶ ಹುಟ್ಟಿದ ಮೂರು ತಿಂಗಳಲ್ಲಿ ತಂದೆ ತೀರಿಕೊಂಡರು. ಗೋಕರ್ಣ, ಕುಮುಟಾ ಹಾಗೂ ಧಾರವಾಡದಲ್ಲಿ ಶಿಕ್ಷಣ ಪಡೆದು, ಮುಂದಿನ ಶಿಕ಼್ಣ ಕುಮಟಾ ಹಾಗೂ ಧಾರವಾಡದಲ್ಲಿ ಮುಂದುವರಿಯಿತು. ಎಸ್.ಟಿ.ಸಿ. ಪರೀಕ್ಷೆಯಲ್ಲಿ, ಆ ಕಾಲದ ಮುಂಬಯಿ ಪ್ರಾಂತ್ಯಕ್ಕೆ ಪ್ರಥಮರಾಗಿ ತೇರ್ಗಡೆಯಾದರು. ಅವರು ಹಿಂದಿಯಲ್ಲಿ ವಿಶಾರದರೂ ಆಗಿದ್ದರು. ಮಾಧ್ಯಮಿಕ ಶಾಲಾ ಅಧ್ಯಾಪಕರಾಗಿ ನಾಲ್ಕು ದಶಕಗಳ ಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಗೌರೀಶರು 1930ರಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡರು. ’ಶಾಂಡಿಲ್ಯ ಪ್ರೇಮಸುಧಾ’ ಕನ್ನಡ ಹಾಗೂ ಮರಾಠಿ ...
READ MORE