ಪಂಜೆ ಮಂಗೇಶರಾಯರ ಬದುಕು ಹಾಗೂ ಬರಹದ ಕುರಿತು ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದ್ದಾರೆ ಲೇಖಕ ಟಿ.ಎಸ್. ಗೋಪಾಲ. ಪಂಜೆ ಮಂಗೇಶರಾಯರ ಬದುಕು ಹೇಗಿತ್ತು. ಅವರ ಬರಹಗಳ ಆಳ ಅಗಲ, ಅವರ ಕನಸಿನ ಮಕ್ಕಳ ಸಾಹಿತ್ಯ ಹೀಗೆ ಪಂಜೆ ಮಂಗೇಶರಾಯರ ಮಾಹಿತಿಯನ್ನು ಸರಳವಾಗಿ ಮಕ್ಕಳಿಗೆ ನೀಡಿದ್ದಾರೆ. ಕೃತಿಯನ್ನು ಲೇಖಕ ನಾ. ಸೋಮೇಶ್ವರ ಅವರು ಸಂಪಾದಿಸಿದ್ದಾರೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE