ಪಂಜೆ ಮಂಗೇಶರಾಯರ ಬದುಕು ಹಾಗೂ ಬರಹದ ಕುರಿತು ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿದೆ. ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. ಪಂಜೆ ಮಂಗೇಶರಾಯರ ಬದುಕು ಹೇಗಿತ್ತು. ಅವರ ಬರಹಗಳ ಆಳ ಅಗಲ, ಅವರ ಕನಸಿನ ಭಾರತ ಹೇಗಿತ್ತು ಹೀಗೆ ಪಂಜೆ ಮಂಗೇಶರಾಯರ ಸಂಪೂರ್ಣ ಮಾಹಿತಿ ಸಿಗಬಲ್ಲ ಕೈಪಿಡಿ ಇದಾಗಿದೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE