‘ಪರಂಪರೆ’ 1985ರಲ್ಲಿ ವಿಶ್ವಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಪರವಾಗಿ ಅ.ರಾ. ಚಂದ್ರಹಾಸ ಗುಪ್ತ ಅವರಿಂದ ಪ್ರಕಟಿತವಾದ ಕಾದಂಬರಿ. ಹಿರಿಯ ಲೇಖಕಿ ಆರ್‍ಯಾಂಬ ಪಟ್ಟಾಭಿ ಅವರು ರಚಿಸಿದ ಈ ಕಾದಂಬರಿ ಭಾರತದ ಭವ್ಯ ಪರಂಪರೆಯನ್ನು ಸೂಚಿಸುತ್ತದೆ. ಇಲ್ಲಿಯ ದೇವಾಲಯಗಳ, ನಂಬಿಕೆಗಳ ಮೇಲೆ ಬೆಳಕು ಚೆಲ್ಲುವ ಕಾದಂಬರಿ ಇದು.
ಕಾದಂಬರಿಗಾರ್ತಿ ಆರ್‍ಯಾಂಬ ಪಟ್ಟಾಭಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆ. 1936 ಮಾರ್ಚ್ 12 ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ. ಎಂ. ಕೃಷ್ಣಸ್ವಾಮಿ, ತಾಯಿ ತಂಗಮ್ಮ. ’ಹೊಂಗನಸು, ಆರಾಧನೆ, ಸವತಿಯ ನೆರಳು, ಕಪ್ಪು-ಬಿಳುಪು, ನನ್ನವಳು’ ಅವರ ಕಥಾಸಂಕಲನಗಳು. ’ಅನುರಾಗ’, ನರಭಿಕ್ಷುಕ ಕಾದಂಬರಿಗಳನ್ನುಹಾಗೂ ಮಕ್ಕಳ ಮತ್ತು ಕ್ರೀಡೆಗೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 'ಟೆನ್ನಿಸ್'’ ಕೃತಿಗೆ ಮಲ್ಲಿಕಾ ಪ್ರಶಸ್ತಿ, ಬಿ. ಸರೋಜದೇವಿ ಶ್ರೀಹರ್ಷ ಪ್ರಶಸ್ತಿ ಸಂದಿವೆ. ...
READ MORE