ಪೆಪ್ಟಿಕ್ ಅಲ್ಸರ್ ಹೊಸ ಬೆಳಕು

Author : ಎಂ.ಜೆ. ಸುಂದರ್ ರಾಮ್

Pages 72

₹ 35.00




Year of Publication: 2012
Published by: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು
Address: ವಿಜ್ಞಾನ ಭವನ, ನಂ 24/2 ಮತ್ತು 24/3, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು 560 070
Phone: 08026718939

Synopsys

ಎಮ್.ಜೆ.ಸುಂದರ್ ರಾಮ್ ಅವರ ‘ಪೆಪ್ಟಿಕ್ ಅಲ್ಸರ್ ಹೊಸ ಬೆಳಕು’ ಕೃತಿಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಕಟಿಸಿದ ಕೃತಿಯಾಗಿದೆ. ಈ ಕೃತಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಸ್. ನಿರಂಜನ ಆರಾಧ್ಯ ಮುನ್ನುಡಿ ಬರೆದಿದ್ದಾರೆ. ‘ನಮ್ಮ ರಾಜ್ಯದ ಜನರಲ್ಲಿ ವಿಜ್ಞಾನವನ್ನು ಪ್ರಚಾರ ಮಾಡಿ ವೈಜ್ಞಾನಿಕ ಮನೋಭಾವದ ಬೆಳವಣಿಗೆಗೆ ಉತ್ತೇಜನ ನೀಡುವುದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮುಖ್ಯ ಧೈಯ, ರಾಜ್ಯದ ವಿವಿಧ ಸ್ಥಳಗಳಲ್ಲಿ ಸ್ವಯಂ ಪ್ರೇರಣೆಯಿಂದ ರೂಪುಗೊಂಡಿರುವ ಪರಿಷತ್ತಿನ ಘಟಕಗಳು ಸ್ಥಳೀಯವಾಗಿ ಈ ಕೆಲಸದಲ್ಲಿ ನಿರತವಾಗಿವೆ. ಉಪನ್ಯಾಸಗಳು, ವಿಚಾರ ಸಂಕಿರಣಗಳು, ವೈಜ್ಞಾನಿಕ ಪ್ರದರ್ಶನಗಳು ಮುಂತಾದುವನ್ನು ಏರ್ಪಡಿಸುವ ಮೂಲಕವು ದಿನನಿತ್ಯದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಹುಡುಕುವಲ್ಲಿ ಜನತೆಗೆ ನೆರವು ನೀಡುವ ಮೂಲಕವೂ ಪರಿಷತ್ತಿನ ಧೈಯಗಳನ್ನು ಸಫಲಗೊಳಿಸುವ ಪ್ರಯತ್ನ ನಡೆದಿದೆ. ಪರಿಷತ್ತು ಪ್ರಕಟಿಸುವ ನಿಯತಕಾಲಿಕೆಗಳೂ ಕಿರುಹೊತ್ತಿಗೆಗಳೂ ಆ ಪ್ರಯತ್ನಕ್ಕೆ ಬೆಂಬಲ ನೀಡುತ್ತಲಿವೆ. ಈಗಾಗಲೇ ಮೂವತ್ತನೇ ವರ್ಷಕ್ಕೆ ಕಾಲಿಟ್ಟಿರುವ “ಬಾಲ ವಿಜ್ಞಾನ" ಮಾಸಪತ್ರಿಕೆ ಈ ದಿಶೆಯಲ್ಲಿ ಸಾಕಷ್ಟು ಯಶಸ್ಸು ಗಳಿಸಿದೆ: ಪರಿಣಾಮವಾಗಿ ಜನಪ್ರಿಯವಾಗಿದೆ. ವಿಜ್ಞಾನ ವಿಷಯಗಳನ್ನು ಕುರಿತ ಕಿರುಹೊತ್ತಗೆಗಳನ್ನು ಪ್ರಕಟಿಸುವ ಕಾರ್ಯವನ್ನು ಪರಿಷತ್ತು ಕೈಗೆತ್ತಿಕೊಂಡು ಈಗಾಗಲೇ 135ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕಗಳ ಪ್ರಕಟಣೆಗೆ ಕರಾವಿಪ ವಿಜ್ಞಾನದ ಎಲ್ಲಾ ಪ್ರಕಾರಗಳನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿದ್ದು ವಿದ್ಯಾರ್ಥಿಗಳ ಮತ್ತು ಜನಸಾಮಾನ್ಯರ ದೈನಂದಿನ ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ನೀಡಿ ಪುಸ್ತಕಗಳನ್ನು ಪ್ರಕಟಿಸುತ್ತಿದೆ. ಈ ದಿಸೆಯಲ್ಲಿ ಹೆಸರಾಂತ ಲೇಖಕರಾದ ಪ್ರೊ|| ಎಂ.ಜೆ.ಸುಂದರ್‌ರಾಮ್ ಅವರು ಬರೆದುಕೊಟ್ಟ "ಪೆಪ್ಟಿಕ್ ಅಲ್ಸರ್ : ಹೊಸಬೆಳಕು” ಎಂಬ ಪುಸ್ತಕವನ್ನು ಕರಾವಿಪ ಹೊರತರುತ್ತಿರುವುದು ಹೆಮ್ಮೆಯೆನಿಸಿದೆ’ ಎಂಬುದಾಗಿ ತಿಳಿಸಿದ್ದಾರೆ.

About the Author

ಎಂ.ಜೆ. ಸುಂದರ್ ರಾಮ್

ಎಂ.ಜೆ, ಸುಂದರ್ ರಾಮ್ ಅವರು ತಮ್ಮ ಶಿಕ್ಷಕ ವೃತ್ತಿಯನ್ನು 1964ರಲ್ಲಿ ಬೆಂಗಳೂರಿನ ವೈದ್ಯಕೀಯ ಕಾಲೇಜನಲ್ಲಿ ಪ್ರಾಣಿಶಾಸ್ತ್ರ ಉಪನ್ಯಾಸಕರಾಗಿ ಪ್ರಾರಂಭಿಸಿದರು. 1969ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ವಿಜಯ ಕಾಲೇಜನ್ನು ಸೇರಿ ಅದರ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ಪ್ರಾಚಾರ್ಯರಾಗಿ, ಉಪಪ್ರಾಂಶುಪಾಲರಾಗಿ ಸೇವೆಸಲ್ಲಿಸಿ, 2000ರಲ್ಲಿ ನಿವೃತ್ತರಾದರು. ನಿವೃತ್ತಿಯ ನಂತರ ಬೆಂಗಳೂರಿನ ಸುರಾನ ಮುಕ್ತ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಪ್ರಾಚಾರ್ಯರಾಗಿ ಕೆಲಸ ನಿರ್ವಹಿಸಿದರು. ಬೆಂಗಳೂರಿನ ಪ್ರತಿಷ್ಠಿತ ಬೇಸ್ ವಿದ್ಯಾಸಂಸ್ಥೆಯಲ್ಲಿ ಕೆಲಕಾಲ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದರು. ಸುಂದರ್ ರಾಮ್‌ರವರು ಕನ್ನಡದಲ್ಲಿ ಜೀವಶಾಸ್ತ್ರ ಮತ್ತು ವೈದ್ಯಕೀಯ ವಿಷಯಗಳಗೆ ಸಂಬಂಧಿಸಿದ ಹಲವಾರು ಜನಪ್ರಿಯ ಪುಸ್ತಕಗಳನ್ನು ...

READ MORE

Related Books