‘ಫೋಟೋ ರಿಯಲಿಸಂ’ ಲೇಖಕ ಕೆ.ವಿ. ಸುಬ್ರಹ್ಮಣ್ಯಂ ಅವರು ರಚಿಸಿರುವ ಈ ಕೃತಿ ಕರ್ನಾಟಕ ಲಲಿತಕಲಾ ಅಕಾಡೆಮಿ ಜನಪ್ರಿಯ ಕಲಾಮಾಲಿಕೆಯಲ್ಲಿ ಪ್ರಕಟವಾಗಿದೆ. ಕಲೆ ಹಾಗೂ ಜನಸಾಮಾನ್ಯರ ನಡುವೆ ಭಾರಿ ಅಂತರವಿದೆ. ಸಮಕಾಲೀನ ಕಲೆಯು ಜನಸಾಮಾನ್ಯರಿಗೆ ಅರ್ಥವಾಗದಿರುವುದೇ ಇದಕ್ಕೆ ಕಾರಣ ಎಂದು ಹಲವರ ಅಭಿಪ್ರಾಯ. ದೃಶ್ಯ ಕಲೆಗಳನ್ನು ಆಸ್ವಾದಿಸುವ ದೃಷ್ಟಿಯಿಂದ ನಮ್ಮ ಸಾಮಾನ್ಯ ಶಿಕ್ಷಣದಲ್ಲೂ ಗಂಭೀರ ಪ್ರಯತ್ನಗಳು ನಡೆಯುತ್ತಿಲ್ಲ. ಅಂತೆಯೇ ಈ ಕೊರತೆಗಳನ್ನು ಸ್ವಲ್ಪವಾದರೂ ತುಂಬುವುದು ಈ ಜನಪ್ರಿಯ ಕಲಾಮಾಲಿಕೆಯ ಆಶಯ. ಈ ನಿಟ್ಟಿನಲ್ಲಿ ಫೋಟೋ ರಿಯಲಿಸಂ ಕುರಿತಾದ ಮಾಹಿತಿಗಳನ್ನು ಒಳಗೊಂಡ ಈ ಪುಸ್ತಕವನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಕಟಿಸಿದೆ.
©2025 Book Brahma Private Limited.