ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ ಸಮೀಪದಲ್ಲಿಯೇ ಇರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಆ ಗ್ರಾಮದಲ್ಲಿನ ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. ಒಂದು ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ ಮಾಡುತ್ತಾರೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ. ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ.
ಈ ಯಶೋಗಾಥೆಯ ರೂವಾರಿ ಶ್ಯಾಮ್ ಸುಂದರ್ ಪಾಲೀವಾಲ್. ಅವರು ಪಿಪ್ಲಾಂತ್ರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದಾಗ 2006ರಲ್ಲಿ ಕಿರಣ್ ನಿಧಿ ಯೋಜನೆ ಸೇರಿದಂತೆ ವಿವಿಧ ಕೆಲಸಕಾರ್ಯಗಳನ್ನು ಕೈಗೆತ್ತಿಕೊಂಡರು. ಗಿಡ ನೆಡುವುದು ಮಾತ್ರವಲ್ಲದೇ ಬೇರೆ ಏನೆಲ್ಲಾ ಕಾರ್ಯಗಳಲ್ಲಿ ಮಾಡಿದ್ದಾರೆ ಎಂಬುದನ್ನು ತಿಳಿಯಲು ನೀವು ಓದಿ ಪಿಪ್ಲಾಂತ್ರಿ.
©2024 Book Brahma Private Limited.