ಉದಯವಾಣಿ ಸಾಪ್ತಾಹಿಕ ಸಂಪದದಲ್ಲಿ ಪ್ರಕಟವಾದ ಅಂಕಣ ಬರಹಗಳ ಸಂಕಲನ ಇದಾಗಿದ್ದು ಒಟ್ಟು 25 ಲೇಖನಗಳಿವೆ. ಇಲ್ಲಿಯ 'ಕೈಮೊರದ ಬಾಲೆ' ಎಂಬ ಲೇಖನ ಕರ್ನಾಟಕ ವಿಶ್ವ ವಿದ್ಯಾಲಯದ ಬಿ.ಎ ಮೊದಲ ಸೆಮ್ ಗೆ ಪಠ್ಯವಾಗಿತ್ತು. ಈ ಲೇಖನ ಸಂಗ್ರಹಕ್ಕೆ ಎರಡನೇ ಬಾರಿ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರಮ್ಮ ಹಾರನಹಳ್ಳಿ ದತ್ತಿನಿಧಿ ಬಹುಮಾನ ದೊರಕಿವೆ. ಇವು ನುಡಿಚಿತ್ರಗಳು ಎಂಬಷ್ಟು ಚಿತ್ರಕ ಶಕ್ತಿ ಹೊಂದಿವೆ.
ಕಥೆಗಾರ್ತಿ ಸ್ತ್ರೀವಾದಿ ಸುನಂದಾ ಕಡಮೆ ಉತ್ತರ ಕನ್ನಡ ಜಿಲ್ಲೆ, ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದವರು. ಸಮಕಾಲೀನ ವಿಷಯಗಳ ಕುರಿತು ಬರೆಯುವ ಸುನಂದಾ ಅವರು ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ, ತುದಿ ಮಡಚಿಟ್ಟ ಪುಟ ಇವು ನಾಲ್ಕು ಕಥಾಸಂಕಲನಗಳು. ಬರೀ ಎರಡು ರೆಕ್ಕೆ, ದೋಣಿ ನಡೆಸೊ ಹುಟ್ಟು, ಹೈವೇ ನಂ. 63, ಎಳೆನೀರು ಇವು ನಾಲ್ಕು ಕಾದಂಬರಿಗಳು. ಪಿಸುಗುಡುವ ಬೆಟ್ಟಸಾಲು, ಪಡುವಣದ ಕಡಲು, ಕತೆಯಲ್ಲದ ಕತೆ ಇವು ಮೂರು ಪ್ರಬಂಧ ಸಂಕಲನಗಳು ಹಾಗೂ ಸೀಳುದಾರಿ ಎಂಬ ಕವನ ಸಂಕಲನಗಳು ಹೊರಬಂದಿವೆ. ಇವರಿಗೆ ಗುಡಿಬಂಡೆ ...
READ MORE