'ಪೊಲೀಸ್ ಶಾಸ್ತ್ರೀಯ ತನಿಖಾ ಪ್ರಸಂಗ' ಪಿ.ಎಸ್. ರಾಮಾನುಜಂ ಅವರ ಮೊದಲ ನಾಟಕ.1986ರಲ್ಲಿ ಮೈಸೂರು ಆಕಾಶವಾಣಿಗಾಗಿ ಬರೆದ ನಾಟಕವಿದು. ಈ ನಾಟಕ ಹಲವು ಬಾರಿ ಪ್ರಸಾರಗೊಂಡಿತ್ತು.
ಪಿ.ಎಸ್. ರಾಮಾನುಜಂ ಕರ್ನಾಟಕ ರಾಜ್ಯ ಪೊಲಿಸ್ ಇಲಾಖೆಯಲ್ಲಿ IPS ಅಧಿಕಾರಿಗಳಾಗಿದ್ದು ಎಡಿಶನಲ್ ಡೈರೆಕ್ಟರ್ ಜನರಲ್ ಆಫ್ ಪೊಲಿಸ್ (ADGP) ಆಗಿ ಕಾರ್ಯನಿರ್ವಹಿಸಿ 2001ರಲ್ಲಿ ನಿವೃತ್ತರಾದರು. ಸಾಹಿತ್ಯ, ಆಡಳಿತ ಎರಡನ್ನೂ ಸಮರ್ಥವಾಗಿ ನಿರ್ವಹಿಸಿದ ಅವರ ಹುಟ್ಟೂರು ಚಾಮರಾಜನಗರ ಜಿಲ್ಲೆಯ ಬೇಡಮೂಡಲು ಗ್ರಾಮ. ತಂದೆ ಪ್ರತಿವಾದಿ ಭಯಂಕರ ಎಂದೇ ಬಿರುದಾಂಕಿತರಾಗಿದ್ದ ಸಂಪತ್ ಕುಮಾರ ಆಚಾರ್ಯ, ತಾಯಿ ಇಂದಿರಮ್ಮ. ಆರಂಭಿಕ ಶಿಕ್ಷಣ ಹರದನಹಳ್ಳಿ, ಚಾಮರಾಜನಗರದಲ್ಲಿ ಪೂರ್ಣಗೊಳಿಸಿದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ(ಆನರ್ಸ್) ಪದವಿ ಪಡೆದರು,ಆನಂತರ ಕನ್ನಡ ಪಂಡಿತ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್, ಎಂ.ಎ ಪ್ರಥಮ ರ್ಯಾಂಕ್ ಸೇರಿದಂತೆ ಐದು ಚಿನ್ನದ ...
READ MORE