ವಿಜಯವಾಣಿ ದಿನಪತ್ರಿಕೆಯ ಅನುಭಾವದ ಬೆಳಗು ಅಂಕಣ ಬರಹಗಳ ಸಂಕಲನ ಇದಾಗಿದೆ. ಮಲ್ಲೇಪುರಂ ಜಿ. ವೆಂಕಟೇಶ ಅವರು ಬರೆಯುತ್ತಿದ್ದ ಆಧ್ಯಾತ್ಮಿಕ ವಿಷಯಗಳ ಕುರಿತು ಈ ಕೃತಿ, ಉನ್ನತ ವಿಚಾರಗಳ ವ್ಯಾಖ್ಯಾನವೂ, ವಿಶ್ಲೇಷಣೆಯೂ ಆಗಿದ್ದು, ತತ್ವಜ್ಞಾನದ ಹರವುಗಳನ್ನು ವಿಸ್ತರಿಸುತ್ತದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE