'ಪ್ರಾಚೀನ ಭಾರತದಲ್ಲಿ ಜಾತಿಗಳ ಉಗಮ' ಕೃತಿಯು ಇರ್ಫಾನ್ ಹಬೀಬ್ ಅವರು ಆಂಗ್ಲ ಭಾಷೆಯಲ್ಲಿ ಬರೆದಿದ್ದು, ಲೇಖಕ ಬಿ. ವಿ ಕಕ್ಕಿಲ್ಲಾಯ ಅವರು ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಜಾತಿಗಳ ಶೃಂಖಲೆಗಳಿಂದ ಬಂಧಿತರಾಗಿ ನಾನಾ ರೀತಿಯ ಕಷ್ಟಗಳನ್ನನುಭವಿಸಿ ಹೋರಾಟ ನಡೆಸಿದ ಭಾರತದ ಜನ ಸಮುದಾಯದ ಬಗೆಗೆ ಈ ಕೃತಿಯಲ್ಲಿ ಸವಿಸ್ತಾರವಾಗಿ ಹೇಳಲಾಗಿದೆ. ಜಾತಿ ಎಂಬುದು ಭಾರತದ ಒಂದು ವಿಶಿಷ್ಟ ಸಾಮಾಜಿಕ ವ್ಯವಸ್ಥೆ. ಅದು ಬೇರೆ ಎಲ್ಲಿಯೂ ಇಲ್ಲದ ಒಂದು ವ್ಯವಸ್ಥೆ. ಜಾತಿ ಪದ್ಧತಿಯ ಬಗ್ಗೆ ಬೆಳಕು ಚೆಲ್ಲಿ ಜಾತಿಯಿಂದ ಸಾಮಾಜದ ಮೇಲಾಗುವ ಪರಿಣಾಮಗಳ ಬಗೆಗೆ ಈ ಕೃತಿಯಲ್ಲಿ ಕಿರುನೋಟ ಬೀರಲಾಗಿದೆ. ಜೊತೆಗೆ ಜಾತಿ ಉಗಮ ಮತ್ತು ಅದರ ಬೆಳವಣಿಗೆಗಳ ಮಾಹಿತಿಯನ್ನು ಈ ಕೃತಿಯು ಒಳಗೊಂಡಿದೆ.
ಬಿ.ವಿ. ಕಕ್ಕಿಲ್ಲಾಯರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರು, ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರು, ಪ್ರಶಸ್ತಿ ವಿಜೇತ ಲೇಖಕರು ಹಾಗೂ ಚಿಂತಕರು. ಉತ್ತರ ಕೇರಳದ ಕಾಸರಗೋಡು ತಾಲೂಕಿನ ಚೆರ್ಕಳದ ಸಮೀಪ, ಪಯಸ್ವಿನಿ ನದಿಯ ದಂಡೆಯ ಮೇಲಿರುವ ಬೇವಿಂಜೆಯಲ್ಲಿ ಶ್ರೀಮಂತ ಭೂಮಾಲಕರಾಗಿದ್ದ ವಿಷ್ಣು ಕಕ್ಕಿಲ್ಲಾಯರ ಕೊನೆಯ ಮಗನಾಗಿ ಏಪ್ರಿಲ್ 9, 1919 ರಂದು ಬಿ. ವಿ ಕಕ್ಕಿಲ್ಲಾಯ ಜನಿಸಿದರು. ಕಾಸರಗೋಡಿನಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಬಳಿಕ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜನ್ನು ಸೇರಿದ ಬಿ ವಿ ಕಕ್ಕಿಲ್ಲಾಯರು ಆ ಕಾಲದಲ್ಲಿ ಉತ್ತುಂಗದಲ್ಲಿದ್ದ ಭಾರತದ ಸ್ವಾತಂತ್ರ್ಯ ...
READ MORE