ಲೇಖಕ ಡಾ. ರಂ. ಶ್ರೀ. ಮುಗಳಿ ಅವರ ಕೃತಿ ʻಪ್ರಾಚೀನ ಕನ್ನಡ ಸಾಹಿತ್ಯ ರೂಪಗಳುʼ. ಇದು ಸಾಹಿತ್ಯ ರೂಪಗಳ ಮತ್ತು ಆಂದೋಲನಗಳ ದೃಷ್ಟಿಯಿಂದ ನಡೆಸಿದ ಸಮೀಕ್ಷೆಯಾಗಿದೆ. ಪುಸ್ತಕದ ಪರಿವಿಡಿಯಲ್ಲಿ ತೀರಮೊದಲಿನ ಸಾಹಿತ್ಯ ರೂಪಗಳು, ಚಂಪು, ಕಂದವೃತ್ತ, ಅಷ್ಟಕ- ಶತಕ,ವಚನ, ಇತರ ಗದ್ಯ, ರಗಳೆ, ಷಟ್ಪದಿ, ತ್ರಿಪದಿ, ಸಾಂಗತ್ಯ, ಗೀತ, ಸಮಾರೋಪ, ಅಭ್ಯಾಸ ಸೂಚಿ ಸೇರಿ ಒಟ್ಟು 13 ಶೀರ್ಷಿಕೆಗಳ ರೂಪಗಳಿವೆ.
ಕನ್ನಡ ಸಾಹಿತ್ಯ ಚರಿತ್ರೆಯ ಮೂಲಕ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾದ ರಂಗನಾಥ ಶ್ರೀನಿವಾಸ ಮುಗಳಿ ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರು. 1906ರ ಜುಲೈ 15ರಂದು ಜನಿಸಿದರು. ತಂದೆ ಶ್ರೀನಿವಾಸರಾವ್ ಮತ್ತು ತಾಯಿ ಕಮಲಕ್ಕ. ಬಾಗಲಕೋಟೆ, ಬಿಜಾಪುರಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. (1928) ಎಂ.ಎ. (1930) ಮಾಡಿದರು. 1932ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಿಕ್ಷಕರಾಗಿ ಸೇರಿದರು. 1933ರಲ್ಲಿ ಸಾಂಗ್ಲಿಯ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿ 1966ರಲ್ಲಿ ನಿವೃತ್ತರಾದರು. ಕೆಲವು ಕಾಲ ಸರಕಾರದ ಸಾಹಿತ್ಯ ಸಂಸ್ಕೃತಿ ಇಲಾಖೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ...
READ MORE