ಡಾ., ರಾಜಕುಮಾರ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ಬೆ.ಗೋ. ರಮೇಶ್ ಅವರ ಕೃತಿ-ಪ್ರಪಂಚದ ಪ್ರಸಿದ್ಧ ವಿಜ್ಞಾನಿಗಳು. ಭಾರತದ ಸರ್.ಸಿ.ವಿ. ರಾಮನ್, ಜಗದೀಶಚಂದ್ರ ಬೋಸ್, ಆಲ್ ಫ್ರೇಡ್ ಐನ್ ಸ್ಟೈನ್, ಥಾಮಸ್ ಅಲ್ವಾ ಎಡಿಸನ್ ಸೇರಿದಂತೆ ಪ್ರಪಂಚದ ಪ್ರಸಿದ್ಧ ವಿಜ್ಞಾನಿಗಳ ಬದುಕು ಹಾಗೂ ಬರಹ ಮಾತ್ರವಲ್ಲ; ವೈಜ್ಞಾನಿಕ ಚಿಂತನೆ ಮತ್ತು ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿಶೇಷವಾಗಿ ಮಕ್ಕಳಿಗೆ ಸ್ಪೂರ್ತಿಯಾಗುವ ಹಾಗೆ ವಿವರಿಸಲಾಗಿದೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE