ಲೇಖಕ ಬೆ.ಗೋ. ರಮೇಶ್ ಅವರ ಕೃತಿ-ಪ್ರಪಂಚದ ಪ್ರಸಿದ್ಧ ವ್ಯಕ್ತಿಗಳು. ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಪ್ರಪಂಚದ ಪ್ರಸಿದ್ಧ ವ್ಯಕ್ತಿಗಳ ವ್ಯಕ್ತಿತ್ವವನ್ನು ಲೇಕಕರು ಕಟ್ಟಿಕೊಟ್ಟಿದ್ದಾರೆ. ಈ ಕೃತಿಯು ಮಕ್ಕಳಿಗಾಗಿ ಸರಳವಾಗಿ ಬರೆದಿದೆ. ದೊಡ್ಡವರೂ ಸಹ ಓದಬಹುದಾಗಿದೆ. ಇಲ್ಲಿಯ ಪ್ರಸಿದ್ಧ ವ್ಯಕ್ತಿಗಳ ಜೀವನ ಚರಿತ್ರೆಯು ಇತರರಿಗೆ ಉತ್ತಮ ಪ್ರೇರಣೆಯಾಗಿವೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE