ಸಾಮಾಜಿಕ ನಿರ್ಬಂಧಗಳನ್ನು ಮೀರುವ ಹೆಣ್ಣಿನ ಸ್ವಗತದಂತೆ ಹೆಣೆಯುವ ಕವಯತ್ರಿ ಪ್ರತಿಭಾ ನಂದಕುಮಾರ್ ಅವರ ಕವಿತೆಗಳು ಮನಸ್ಸಿಗೆ ಬಹು ಗಾಢವಾಗಿ ನಾಟುತ್ತವೆ. ಹೆಣ್ಣಿನ ಬಗ್ಗೆ ನಮಗಿರುವ ದೃಷ್ಟಿಕೋನಕ್ಕಿಂತ ಉಳಿದ ಲವಲವಿಕೆಗಳೂ ಬಾಳಿನಲ್ಲಿ ಇವೆ ಎಂದು ಒಡಮೂಡಿಸುವ ಸಾಹಸ ಮಾಡುತ್ತವೆ ಇಲ್ಲಿಯ ಕವಿತೆಗಳು.
ಲೇಖಕಿ ಪ್ರತಿಭಾ ನಂದಕುಮಾರ್ ಅವರು ಮೂಲತಃ ಬೆಂಗಳೂರಿನವರು. 1955 ಡಿಸೆಂಬರ್ 25ರಂದು ಜನಿಸಿದರು. ತಂದೆ-ವಿ. ಎಸ್. ರಾಮಚಂದ್ರರಾವ್, ತಾಯಿ- ಯಮುನಾಬಾಯಿ. ಬಾಲ್ಯದ ಬಹುದಿನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಳೆದಿರುವ ಪ್ರತಿಭಾ, ಮದ್ರಾಸ್ ವಿಶ್ವವಿದ್ಯಾಲಯದಿಂದ ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದಾರೆ. ಎನ್.ಜಿ.ಎಫ್‌ನಲ್ಲಿ ಭಾಷಾಂತರಕಾರರಾಗಿ ನಂತರ ಇಂಡಿಯನ್ ಎಕ್ಸ್‌ಪ್ರೆಸ್, ಡೆಕ್ಕನ್ ಹೆರಾಲ್ಡ್ ಮತ್ತು ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿಯೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತಿ ನಂದಕುಮಾರ್ ಹಾಗೂ ಮಕ್ಕಳು ಅಭಿರಾಮ್ ಮತ್ತು ಭಾಮಿನಿ ಜೊತೆ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಪ್ರತಿಭಾ ನಂದಕುಮಾರ್ ಕಾವ್ಯಧರ್ಮವನ್ನೇ ...
READ MORE