ಇದು ಯು.ಆರ್. ಅನಂತಮೂರ್ತಿಯವರ ಮೊದಲ ಕಾದಂಬರಿ. ಅವರ ಪ್ರಖ್ಯಾತ ಕಾದಂಬರಿ 'ಸಂಸ್ಕಾರ'ಕ್ಕೂ ಮೊದಲು ಬರೆದದ್ದು. ಸುಮಾರು 1959ರಲ್ಲಿ, ಅವರ ಇಪ್ಪತ್ತೇಳನೆಯ ವಯಸ್ಸಿನಲ್ಲಿ ಬರೆದ ಈ ಕೃತಿಯ ಹಸ್ತಪ್ರತಿ ಇತ್ತೀಚೆಗೆ ಅಕಸ್ಮಾತ್ತಾಗಿ ದೊರೆಯಿತು. ಈ ಅಪ್ರಕಟಿತ ಕಾದಂಬರಿಯು ನಮ್ಮ ಕಾಲದ ಶ್ರೇಷ್ಠ ಲೇಖಕರೊಬ್ಬರೆ ಆರಂಭ ಘಟ್ಟದ ಬರಹದ ಅಪೂರ್ವ ದಾಖಲೆ ಮಾತ್ರವಲ್ಲದೇ ಆ ಸಮಯದಲ್ಲಿ ಕನ್ನಡ ಸಾಹಿತ್ಯದಲ್ಲಿ ನಡೆಯುತ್ತಿದ್ದ ಹೊಸ ಪ್ರಯೋಗಗಳ ಅತ್ಯುತ್ತಮ ಉದಾಹರಣೆಯೂ ಆಗಿದೆ.
ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...
READ MORE