ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಬರೆದ ಮೊದಲ ಸಾಮಾಜಿಕ ಕಾದಂಬರಿ-ಪ್ರೇಮ ಪಂಜರ. ಗೋವಾ ರಾಜ್ಯ ವ್ಯಾಪ್ತಿಯ ಕಾಡಿನಲ್ಲಿ ಭೇಟಿಯಾದ ಗಂಡು -ಹೆಣ್ಣಿನ (ಕಾಮಾಕ್ಷಿ-ಪ್ರಭಾಕರ ) ಭೇಟಿ ಪ್ರೇಮದಲ್ಲಿ ಪರಿವರ್ತನೆಗೊಳ್ಳುವ ಹಾಗೂ ಬಹುತೇಕವಾಗಿ ಗೋವಾ ಕಾಡುಗಳ ಪ್ರಕೃತಿ ಚಿತ್ರಣವೇ ಆವರಿಸಿರುವ ರಮ್ಯ ಕಾದಂಬರಿ ಇದು.
ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...
READ MORE