ಹೆಚ್ಚು ಅಬ್ಬರವಿಲ್ಲದ, ನೇರ ನಿರೂಪಣೆಯ ಸದಭಿರುಚಿಯ ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರಿಗೆ ನೀಡಿದವರು-ನಿರ್ದೇಶಕ ಎಂ.ಆರ್.ವಿಠ್ಠಲ್. ರಾಜ್‌ಕುಮಾರ್ ಅಭಿನಯದ ‘ನಂದಾದೀಪ’ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡಿ ಚೊಚ್ಚಲ ಚಿತ್ರದಲ್ಲೇ ಸೈ ಎನಿಸಿಕೊಂಡ ಕಣ್ಮಣಿ ಅವರು. ಅವರ ಜೀವನ ಸಾಧನೆ, ಮುಗ್ಧ ವ್ಯಕ್ತಿತ್ವ, ಸಿನಿಮಾ ಪ್ರೇಮವನ್ನು ಲೇಖಕ ಎನ್. ಎಸ್. ಶ್ರೀಧರ ಮೂರ್ತಿ ಅವರು ಅನಾವರಣಗೊಳಿಸುವ ಕೃತಿ
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE