ತರಂಗ ವಾರಪತ್ರಿಕೆಯಲ್ಲಿ ‘ಪ್ರಿಯ ಓದುಗ’ ಅಂಕಣ ಬರೆಹವಾಗಿ ಪ್ರಕಟವಾದ ಲೇಖನಗಳ ಸಂಗ್ರಹ ಕೃತಿ-ಪ್ರಿಯ ಓದುಗರೇ. ಇದು ಭಾಗ-8ರ ಕೃತಿ. ಪ್ರಕೃತಿ ಪ್ರೇಮ ಸೇರಿದಂತೆ ವಿವಿಧ ವಿಷಯವಸ್ತುವನ್ನು ಆಯ್ದ ಬರೆಹಗಳು ಇಲ್ಲಿವೆ. ಲೇಖಕಿ ಸಂಧ್ಯಾ ಎಸ್. ಪೈ, ತಮ್ಮ ವಿಷಯ ವಸ್ತುವಿನ ಆಯ್ಕೆ, ನಿರೂಪಣಾ ಶೈಲಿ, ಸನ್ನಿವೇಶಗಳ ಸುಂದರ ಜೋಡಣೆ ಇತ್ಯಾದಿ ಅಂಶಗಳಿಂದ ಇಲ್ಲಿಯ ಬರೆಹಗಳು ಓದುಗರ ಗಮನ ಸೆಳೆಯುತ್ತವೆ. ಸಂಪಾದಕೀಯದ ಒಟ್ಟು 46 ಬರೆಹಗಳಿವೆ.
ಮಣಿಪಾಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ವಿಭಾಗದ ಗೌರವ ನಿರ್ದೇಶಕಿಯಾಗಿರುವ ಸಂಧ್ಯಾ ಎಸ್. ಪೈ ಅವರು ಪತ್ರಿಕೋದ್ಯಮಿ, ಲೇಖಕಿ. ತರಂಗ ವಾರಪತ್ರಿಕೆ ಸೇರಿದಂತೆ ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ನ ನಾಲ್ಕು ಪತ್ರಿಕೆಗಳಿಗೆ ಸಂಪಾದಕಿ ಆಗಿದ್ದಾರೆ. ಸಂಧ್ಯಾ ಅವರು ಜನಿಸಿದ್ದು ಚಿಕ್ಕಮಗಳೂರಿನಲ್ಲಿ 1947ರ ಫೆಬ್ರುವರಿ 26ರಂದು. ತಂದೆ ಬಿ. ನಾರಾಯಣ ಬಾಳಿಗಾ ಹಾಗೂ ತಾಯಿ ಸುಮಿತ್ರಾದೇವಿ. ಇದು ಈಜಿಪ್ಟ್ ಇದು ಇಸ್ರೇಲ್ (ಪ್ರವಾಸ ಕಥನ), ಸಂಪಾದಕೀಯ ಅಂಕಣಗಳಾದ ’ಪ್ರಿಯ ಓದುಗರೇ’ ಬರಹಗಳ 10 ಸಂಪುಟಗಳು ಪ್ರಕಟವಾಗಿವೆ. ಕೊಂಕಣಿ ರಾಂದಪ (ಕನ್ನಡ, ಇಂಗ್ಲಿಷ್ ಆವೃತ್ತಿ). ಯಕ್ಷಪ್ರಶ್ನೆ, ಪರಂಪರೆಯ ಪುಟಗಳಿಂದ (ಭಾರತೀಯ ಧಾರ್ಮಿಕ-ಸಾಂಸ್ಕೃತಿಕ ಮೌಲ್ಯಗಳ ...
READ MORE