ಪುಲಿನ ಬಿಹಾರಿ ದಾಸ್ ಅವರ ಜೀವನಚರಿತ್ರೆಯ ಕೃತಿ ಇದು. ಲೇಖಕ ನಾ. ಡಿಸೋಜ ಅವರು ರಚಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಪುಲಿನ ಬಿಹಾರಿ ದಾಸ್ ಅವರ ಜೀವನದ ವಿವಿಧ ಹಂತಗಳನ್ನು ಲೇಖಕರು ಚಿತ್ರಿಸಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಬಲ ಬ್ರಿಟಿಷ್ ಸರ್ಕಾರದ ವಿರುದ್ಧ ಹೋರಾಡಿದ ಕ್ರಾಂತಿವೀರ. ಯುವಕರ ಸಂಘಟನೆ ನಡೆಸಿದರು. ಸೆರೆಮನೆಗೆ ಹೋದರು, ಅಂಡಮಾನಿನ ನರಕಯಾತನೆಯನ್ನು ಏಳುವರ್ಷ ಕಾಲ ಅನುಭವಿಸಿದರು. ಕಡೆಯವರೆಗೆ ದೇಶಕ್ಕಾಗಿ ಬದುಕಿದರು ಎಂದು ವ್ಯಕ್ತಿಯ ಕುರಿತಾಗಿ ವಿವರಿಸಲಾಗಿದೆ.
ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...
READ MORE