ಅನಾದಿ ಕಾಲದಿಂದಲೂ ದೇವಾಲಯಗಳು ಪವಿತ್ರ ಸ್ಥಾನದ ಹೆಗ್ಗಳಿಕೆಯನ್ನು ಉಳಸಿಕೊಂಡು ಬಂದಿವೆ. ಅಷ್ಟು ಮಾತ್ರವಲ್ಲದೆ ಅದರ ಉಗಮದ ಹಿಂದೊಂದು ಇತಿಹಾಸ ಇರುತ್ತದೆ. ಈ ಹಿನ್ನೆಲೆಯಲ್ಲಿ ಲೇಖಕರು ಕರ್ನಾಟಕ ದೇಗುಲಗಳ ಸ್ಥಳ ವೈಶಿಷ್ಟ್ಯತೆ, ಉಗಮದ ಹಾದಿ, ಪ್ರಸಿದ್ಧತೆ ಹಾಗೂ ಪ್ರಾಮುಖ್ಯತೆಯನ್ನು ಸವಿವರವಾಗಿ ನೀಡಿದ್ದಾರೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE