ಹೆಸರಾಂತ ಉರ್ದು ಲೇಖಕ ಅಬ್ದುಲ್ ಹಲೀಮ್ ಶರರ್ ಅವರು ಲಖನೌ ಕುರಿತ ಬರೆದಿರುವ ಕೃತಿಯನ್ನು ಲೇಖಕ ಡಾ. ಪಂಚಾಕ್ಷರಿ ಹಿರೇಮಠ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.. ಲಖನೌ ನಗರದ ಸಾಂಸ್ಕೃತಿಕ-ಸಾಹಿತ್ಯಕ, ರಾಜಸತ್ತೆಯ ಆಡಳಿತದ ವೈಖರಿ, ರಾಜಕೀಯ ವಿದ್ಯಮಾನಗಳು ಇತ್ಯಾದಿ ಅಂಶಗಳನ್ನು ಮಾತ್ರವಲ್ಲ; ಸ್ಥಳೀಯತೆಯನ್ನು ಸುಂದರವಾಗಿ ಬಿಂಬಿಸುವ ಸಾಹಿತ್ಯವಾಗಿ ಈ ಕೃತಿ ಗಮನ ಸೆಳೆಯುತ್ತದೆ.
ಪಂಚಾಕ್ಷರಿ ಹಿರೇಮಠ ಅವರು 1933ರ ಜನೆವರಿ 6 ರಂದು ರಾಯಚೂರು ಜಿಲ್ಲೆಯ ಕೊಪ್ಪಳ ತಾಲೂಕಿನ ಬಿಸರಹಳ್ಳಿಯಲ್ಲಿ ಜನಿಸಿದರು. ತಾಯಿ ಬಸಮ್ಮ; ತಂದೆ ವೇದಮೂರ್ತಿ ಮಲಕಯ್ಯ. 2 ವರ್ಷದವರಿದ್ದಾಗ ಪಂಚಾಕ್ಷರಿ ತಮ್ಮ ತಂದೆಯನ್ನು ಕಳೆದುಕೊಂಡರು. ಬಿಸರಹಳ್ಳಿಯಲ್ಲಿ ಆರಂಭಿಕ ಶಿಕ್ಷಣ, ನಂತರ ಕೊಪ್ಪಳಕ್ಕೆ ಬಂದರು. ಭಾರತ ಸ್ವತಂತ್ರವಾದರೂ ಸಹ ನಿಜಾಮಶಾಹಿ ಆಳ್ವಿಕೆಯಲ್ಲಿದ್ದ ಕೊಪ್ಪಳದಲ್ಲಿ ದಬ್ಬಾಳಿಕೆ ನಡೆದಿತ್ತು. ಸ್ವಾಮಿ ರಮಾನಂದ ತೀರ್ಥರ ಮುಂದಾಳುತ್ವದಲ್ಲಿ ಹೈ-ಕ ವಿಮೋಚನಾ ಚಳವಳಿ ಆರಂಭವಾಗಿತ್ತು. ವಿಮೋಚನೆಯಾದ ಬಳಿಕ ಬಿಸರಹಳ್ಳಿಗೆ ಮರಳಿದ ಪಂಚಾಕ್ಷರಿ ಅವರು ಕೊಪ್ಪಳ, ಕಲಬುರಗಿ ಸುತ್ತಾಡಿ ಕೊನೆಗೆ ಧಾರವಾಡಕ್ಕೆ ಬಂದರು. ಅವರು ಸ್ವಾಧ್ಯಾಯ ಬಲದಿಂದಲೇ ಸ್ನಾತಕೋತ್ತರ ಪದವಿ ಪಡೆದರು. 1985ರಲ್ಲಿ ಅಮೆರಿಕೆಯ ಅರಿಝೋನಾ ಜಾಗತಿಕ ...
READ MORE