ಕನ್ನಡ ನವೋದಯ ಕವಿಗಳ ಪೈಕಿ ಪ್ರಮುಖರಾದವರು ಕವಿ ಪು.ತಿ. ನರಸಿಂಹಾಚಾರ್ ಅವರು. ಸೊಗಸಾದ ಕವಿತೆಗಳು ಹಾಗೂ ಗೀತನಾಟಕಗಳ ಮೂಲಕ ಕನ್ನಡಿಗರಿಗೆ ಪ್ರಿಯರಾದ ನರಸಿಂಹಾಚಾರ್ ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ. ನವೋದಯ ಕಾವ್ಯ ಪರಂಪರೆಯನ್ನು ಬಿಂಬಿಸುವ ಅದರ ಸೊಬಗನ್ನು ಕಟ್ಟಿಕೊಡುವ ಕವಿತೆಗಳು ಈ ಸಂಕಲನದ ಭಾಗವಾಗಿವೆ.
ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ 1905ರ ಮಾರ್ಚ್ 17ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ. ಬಾಲ್ಯದ ವಿದ್ಯಾಭ್ಯಾಸವನ್ನು ಮೇಲುಕೋಟೆ ಮತ್ತು ಮೈಸೂರಿನಲ್ಲಿ ಮುಗಿಸಿದ ನಂತರ ಬಿ.ಎ. ಪದವಿಯನ್ನು ಗಳಿಸಿದ ಮೇಲೆ ಗೋರಕ್ಷಕ ಸಮಿತಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸಿದರು. ಅನಂತರ ಸೈನ್ಯದ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಕೆಲಸಕ್ಕೆ ಸೇರಿದರು. ಅದೇ ಕಚೇರಿಯಲ್ಲಿ 1938ರಲ್ಲಿ ವ್ಯವಸ್ಥಾಪಕರಾಗಿಯೂ 1945ರಲ್ಲಿ ಅಧೀಕ್ಷಕರಾಗಿಯೂ ಕೆಲಸ ಮಾಡಿದ್ದ ಅವರು ಅನಂತರ 1952ರಲ್ಲಿ ಶಾಸನ ಸಭಾ ಕಚೇರಿಯ ಸಂಪಾದಕರೂ ಆಗಿದ್ದರು. ಕನ್ನಡ ವಿಶ್ವಕೋಶದ ಕಚೇರಿಯಲ್ಲಿ ಭಾಷಾಂತರಕಾರ ...
READ MORE